ಕ್ರೀಡಾಕೂಟ-ದೊರೆಸ್ವಾಮಿ 2 ಚಿನ್ನ , 1 ಬೆಳ್ಳಿ ಪದಕ ವಿಜೇತ

ಕೋಲಾರ,ಏ.೧೭: ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ, ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ೨ನೇ ರಾಜ್ಯಮಟ್ಟದ ಮಾಸ್ಟರ್ ಗೇಮ್ಸ್ ಕ್ರೀಡಾಕೂಟದಲ್ಲಿ, ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ಜಿ.ದೊರೆಸ್ವಾಮಿ ಉದ್ದಜಿಗಿತ ಮತ್ತು ೪೦೦ ಮೀಟರ್ ಓಟದಲ್ಲಿ ಕ್ರಮವಾಗಿ ಪ್ರಥಮ ಸ್ಥಾನ, ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನದೊಂದಿಗೆ ೨ ಚಿನ್ನ ಹಾಗೂ ಒಂದು ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಹೈದರಾಬಾದ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.