
ತಿಪಟೂರು, ಸೆ. ೨- ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ೨೧೦ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ೨೨೬ ಅಂಕಗಳೊಂದಿಗೆ ಸತತ ೮ನೇ ಬಾರಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ಇಡೀ ತಾಲ್ಲೂಕಿನಲ್ಲಿ ಶಿಕ್ಷಣದ ಜತೆಗೆ ಕ್ರೀಡೆಗೂ ಸಹ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಕ್ರೀಡೆಗೆ ಪ್ರೋತ್ಸಾಹ ನೀಡಿದ ಉಪನ್ಯಾಸ ವೃಂದ್ಧಕೆ ಕ್ರೀಡಾ ಕಾರ್ಯದರ್ಶಿಗಳಿಗೆ ಪ್ರಾಚಾರ್ಯ ಎಂ.ಡಿ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.