ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

ದಾವಣಗೆರೆ ಸೆ.೧೬; ೨೦೨೦-೨೧ನೇ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ ೨೦೧೯ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಸೆ.೨೪ ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣ ಸಲಾವುದಿಲ್ಲ. ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇವರಿಂದ ಧೃಡೀಕರಿಸಿಕೊಂಡು ನಂತರ, hಣಣಠಿ://ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜಥಿes ಈ ವೆಬ್‌ಸೈಟ್ ಮೂಲಕ ಆಪ್‌ಲೋಡ್ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.