ಕ್ರೀಡೆಗಳಲ್ಲಿ ಪಾಲ್ಗೊಂಡರೆ ಮಾನಸಿಕ, ದೈಹಿಕ ಸದೃಡತೆ‌ ಸಾಧ್ಯ

ದಾವಣಗೆರೆ.ಜೂ.೪: ಹಲವು ಒತ್ತಡಗಳ ನಡುವೆ ಕೆಲಸ ನಿರ್ವಹಿಸುವ ವಕೀಲರಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢತೆ ಸಾಧಿಸಲು ಕ್ರೀಡಾಕೂಟಗಳು ಅವಶ್ಯಕ. ಈ ನಿಟ್ಟಿನಲ್ಲಿ ವಕೀಲರು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣ್ ಕುಮಾರ್ ತಿಳಿಸಿದರು.ಭಾನುವಾರ ಮುಂಜಾನೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಜಿಲ್ಲಾ ವಕೀಲರ ಸಂಘ ಆಯೋಜಿಸಲಾಗಿದ್ದ ವಕೀಲರ ಸೌಹಾರ್ದ ಕ್ರಿಕೆಟ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನ್ಯಾಯಾಲಗಳ ಕಾರ್ಯಕಲಾಪಗಳ ಹಿನ್ನೆಲೆಯಲ್ಲಿ ವಕೀಲರು ಸದಾ  ಬಂದಿಲ್ಲೊಂದು ಒತ್ತಡದಲ್ಲಿ ತೊಡಗಿರುತ್ತಾರೆ. ಇವರಿಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಿಡುವು ಬೇಕಾದರೆ ಇಂತಹ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.ಸದ್ಯಕ್ಕೆ ದಾವಣಗೆರೆ ನಗರದಲ್ಲಿ ಕೆಲಸ ನಿರ್ವಹಿಸುವ ವಕೀಲರಿಗೆ ಅಯೋಜಲಾಗಿರುವ ಈ ಕ್ರೀಡಾಕೂಟದಲ್ಲಿ ಎಲ್ಲ ವಕೀಲರು ಪಾಲ್ಗೊಂಡಿದ್ದು, ಹಲವು ಪ್ರತಿಭೆಗಳು ನಮ್ಮಲ್ಲಿವೆ. ಅಂತ ಪ್ರತಿಭೆಗಳನ್ನು ಹೊರ ತರಲು ಈ ಕ್ರೀಡಾಕೂಟ ಸಹಕರಿಯಾಗಲಿದೆ ಎಂದರು.ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಮತ್ತು ವಲಯ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸಲು ದಾವಣಗೆರೆ ಜಿಲ್ಲಾ ವಕೀಲರ ಸಂಘ ನಿರ್ಧರಿಸದೆ. ಇಂದು ನಡೆದ ಕ್ರಿಕೆಟ್ ಕ್ರೀಡಾಕೂಟದಲ್ಲಿ ಒಟ್ಟು ಆರು ತಂಡಗಳಿದ್ದು, ಅದರಲ್ಲಿ ಐದು ತಂಡಗಳು ವಕೀಲರ ತಂಡಗಳು, ಇನ್ನುಳಿದ ಒಂದು ತಂಡ ನ್ಯಾಯಾಲಯದ ಸಿಬ್ಬಂದಿಯದ್ದು. ಒಟ್ಟು ನೂರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. ಈ ವೇಳೆ ದಾವಣಗೆರೆ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ.ಬಸವರಾಜ್ ಗೋಪನಾಳು, ಕಾರ್ಯದರ್ಶಿ ಎಸ್. ಬಸವರಾಜ್, ಸಹಕಾರ್ಯದರ್ಶಿ ಎ. ಎಸ್. ಮಂಜುನಾಥ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಡಿ.ಪಿ.ಬಸವರಾಜ್, ಕಾರ್ಯದರ್ಶಿ ಎಲ್.ಹೆಚ್.ಪ್ರದೀಪ್, ಉಪಾಧ್ಯಕ್ಷ ದಿವಾಕರ, ಸಹ ಕಾರ್ಯದರ್ಶಿ ರಾಘವೇಂದ್ರ ಯೋಗೇಶ್ವರಪ್ಪ, ಸೇರಿದಂತೆ ಪ್ರಸ್ತುತ ಹಾಗೂ ನಿಕಟ ಪೂರ್ವ ಪದಾಧಿಕಾರಿಗಳು, ದಾವಣಗೆರೆ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಇದ್ದರು.