ಕ್ರೀಡೆಗಳಲ್ಲಿ ಸೋಲು-ಗೆಲುವು ಸಮನಾಗಿ ಸ್ವೀಕರಿಸಿ

ಅಥಣಿ :ಸೆ.13: ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ. ಕ್ರೀಡಾಕೂಟದಲ್ಲಿ ಸೋಲು-ಗೆಲುವು ಸಾಮಾನ್ಯ. ಅವುಗಳನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಹೊಂದಬೇಕು ಎಂದು ಅಡಹಳ್ಳಿ ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಕೆಂಚಣ್ಣವರ ಹೇಳಿದರು.
ಅವರು ಸೋಮವಾರ ತಾಲೂಕಿನ ಅಡಹಳ್ಳಿ ಗ್ರಾಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಕ್ಕೋಡಿ ಮತ್ತು ಸರ್ಕಾರಿ ಪ.ಪೂ ಮಹಾವಿದ್ಯಾಲಯ ಅಡಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಅಥಣಿ ತಾಲೂಕಾ ಮಟ್ಟದ ಪ.ಪೂ ಕಾಲೇಜು ವಿದ್ಯಾರ್ಥಿಗಳ 2022-23ನೇ ಸಾಲಿನ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಪಂ ಮಾಜಿ ಅಧ್ಯಕ್ಷ ಈರಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ತಾಲೂಕಾ ಮಟ್ಟದ ಕ್ರೀಡಾ ಕೂಟಗಳು ನಮ್ಮ ಅಡಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಅನೇಕ ಪ್ರತಿಭೆಗಳಿವೆ. ಅವರನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಕಾರ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಡುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ನಮ್ಮ ಮಕ್ಕಳು ಉತ್ತಮ ಸಾಧನೆ ಮಾಡಬೇಕಾದರೆ ತಾಲೂಕು ಆಡಳಿತ ಕ್ರೀಡಾಪಟುಗಳಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ತಾಪಂ ಮಾಜಿ ಸದಸ್ಯ ಶಿವು ಗುಡ್ಡಾಪುರ, ಕ್ರೀಡಾಕೂಟ ದ್ವಜಾರೋಹಣ ನೆರವೇರಿಸಿ ಮಾತನಾಡಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಮಾನಸಿಕ ಮತ್ತು ದೈಹಿಕ ಸದೃಢತೆ ಒದಗಿಸುವುದರ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಯಾವುದೇ ಸ್ಪರ್ಧೆಯಲ್ಲಿ ಒಬ್ಬರಿಗೆ ಸೋಲು- ಇನ್ನೊಬ್ಬರಿಗೆ ಗೆಲುವು ಇದ್ದೇ ಇರುತ್ತದೆ. ಅವುಗಳನ್ನು ಸಮನಾಗಿ ಸ್ವೀಕರಿಸಿ ಗ್ರಾಮೀಣ ಮಟ್ಟದಲ್ಲಿ ನಡೆಯುವ ತಾಲೂಕ ಮಟ್ಟದ ಕ್ರೀಡಾಕೂಟಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.
ಮಹಾವಿದ್ಯಾಲಯದ ಪ್ರಾಚಾರ್ಯ ಲಕ್ಷ್ಮಣ ಬಣಜವಾಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾದ್ಯಕ್ಷ ಲಚ್ಚಪ್ಪ ಪತ್ತಾರ, ಸೂರ್ಯಕಾಂತ ಡಂಬಳಕರ, ಬಸವರಾಜ ಮಾಳಿ, ಸಿದರಾಯ ಕೋಹಳ್ಳಿ, ಸತ್ಯಪ್ಪ ಸನದಿ, ಚಂದ್ರಶೇಖರ ಕೋಳಿ, ಮಹಾದೇವ ಪಾಟೀಲ, ಆನಂದ ದೂಳಶೇಟ್ಟಿ, ಮೋಹನ ಸೂರ್ಯವಂಶಿ, ಭೀಮು ಕೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಎಸ್.ಬಿ. ಪಾಯಗೊಂಡ ಮತ್ತು ಎಸ್.ಎ. ಹಿರೇಕೋಡಿ ನಿರೂಪಿಸಿದರು, ಆರ್.ಎಚ್. ಬಜಂತ್ರಿ ವಂದಿಸಿದರು.