ಕ್ರೀಡೆಗಳಿಂದ ಭವಿಷ್ಯದಲ್ಲಿ ಉತ್ತಮ ಅವಕಾಶ – ಎಮ್.ವಿಜಯಕುಮಾರ

ರಾಯಚೂರು.ಸೆ.೦೨- ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್ ಎಸ್ ಆರ್ ಜಿ ಮಹಿಳಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಉದ್ಘಾಟಕರಾಗಿ ಆಗಮಿಸಿದ ಎಮ್. ವಿಜಯಕುಮಾರ, ಅಧ್ಯಕ್ಷರು, ಕ್ರೀಡಾ ಸಮಿತಿ, ತಾರನಾಥ್ ಶಿಕ್ಷಣ ಸಂಸ್ಥೆ ರಾಯಚೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,”ಇಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ವಿವಿಧ ರೀತಿಯ ಅವಕಾಶಗಳು ಲಭ್ಯವಿವೆ. ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡರೆ ನಮ್ಮ ಆಟದ ಕೌಶಲ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.೨ರಷ್ಟುಮೀಸಲಾತಿ ಇದ್ದು, ಇತ್ತೀಚಿನ ದಿನಗಳಲ್ಲಿ ಸರ್ಕಾರವು ಆಟಗಾರರಿಗೆ ಎಲ್ಲ ರೀತಿಯಲ್ಲೂ ಸಹಾಯ ಮಾಡುತ್ತಿದೆ.ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಅವರನ್ನು ಗೌರವಿಸಲಾಗುತ್ತದೆ ಮತ್ತು ಕಾಳಜಿ ವಹಿಸಲಾಗುತ್ತದೆ.
ಸರ್ಕಾರವೂ ಆಟಗಾರರಿಗೆ ಆರ್ಥಿಕ ಸಹಾಯ ಮಾಡುತ್ತದೆ. ಅವರಿಗೆ ಏನು ಬೇಕೋ ಅದನ್ನು ಸರ್ಕಾರ ಕೊಡುತ್ತದೆ.
ಆರ್ಥಿಕ ಅಡಚಣೆಗಳಿಂದ ಬಳಲುತ್ತಿರುವ ಜನರು ತಮ್ಮ ಆಟದ ಕೌಶಲ್ಯವನ್ನು ಎಂದಿಗೂ ನಿಗ್ರಹಿಸುವುದಿಲ್ಲ, ಆದರೆ ಅವರು ಮತ್ತಷ್ಟು ಸುಧಾರಿಸಲು ಇದು ಕಾರಣವಾಗಿದೆ. ಅದೇ ಸಮಯದಲ್ಲಿ ಕ್ರೀಡೆಗಳನ್ನು ಆಡುವುದು ಭವಿಷ್ಯದಲ್ಲಿ ಉತ್ತಮ ಉದ್ಯೋಗಕ್ಕಾಗಿ ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ.” ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ವೆಂಕಟೇಶ್ ದೊಡ್ಡಮನಿ ಪ್ರಾಚಾರ್ಯರು, ಸಿ.ಎಂ.ಎನ್ ಪಿಯು ಕಾಲೇಜ್ ರಾಯಚೂರು ಇವರು ಮಾತನಾಡುತ್ತಾ, “ದಿನನಿತ್ಯ ಆಡುವ ಅಭ್ಯಾಸ ಮಾಡಿಕೊಂಡರೆ ರೋಗಗಳಿಂದ ದೂರ ಉಳಿಯುತ್ತೇವೆ. ವಿವಿಧ ರೀತಿಯ ಕ್ರೀಡೆಗಳನ್ನು ಆಡುವುದರಿಂದ ದೇಹದ ವಿವಿಧ ಭಾಗಗಳಿಗೆ ಸಂಬಂಧಿಸಿದ ನೋವು, ಸ್ಥೂಲಕಾಯತೆ, ಅಧಿಕ ತೂಕ ಮತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಂತಹ ನಮ್ಮ ಅನೇಕ ಕಾಯಿಲೆಗಳನ್ನು ಗುಣಪಡಿಸುತ್ತದೆ” ಎಂದು ಮಕ್ಕಳಿಗೆ ಪ್ರೋತ್ಸಾಹದ ಮಾತುಗಳನ್ನು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರತಿಲಾಲ್ ಪಟೇಲ್, ಕಾರ್ಯದರ್ಶಿಗಳು, ಆಡಳಿತ ಮಂಡಳಿ, ಎಸ್‌ಎಸ್ ಆರ್ ಜಿ ಮಹಿಳಾ ಮಹಾವಿದ್ಯಾಲಯ, ರಾಯಚೂರು ಇವರು ಮಾತನಾಡುತ್ತಾ, “ಪ್ರತಿಯೊಂದು ಮಗುವೂ ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಹಿಸುವುದು ಬಹಳ ಅವಶ್ಯಕವಾಗಿದೆ. ಬೆಳೆಯುತ್ತಿರುವ ಮಕ್ಕಳಿಗೆ ಇದು ತುಂಬಾ ಅವಶ್ಯಕವಾಗಿದೆ, ಇದರಿಂದ ಅವರು ಸರಿಯಾಗಿ ಅಭಿವೃದ್ಧಿ ಹೊಂದುತ್ತಾರೆ ಮತ್ತು ಅವರಲ್ಲಿ ಕ್ರೀಡಾ ಮನೋಭಾವ, ಪ್ರಾಮಾಣಿಕತೆ, ಧೈರ್ಯ ಮತ್ತು ಸಾಂಘಿಕ ಕಾರ್ಯವನ್ನು ಬೆಳೆಸಬಹುದು” ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಸಂಯೋಜಕರಾದ ಮಲ್ಲಿಕಾರ್ಜುನ ಎನ್ ಇವರು ಮಾತನಾಡುತ್ತಾ, “ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾರತ ಯಾವತ್ತೂ ಹಿಂದೆ ಬಿದ್ದಿಲ್ಲ. ಭಾರತ ಯಾವಾಗಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಮತ್ತು ಭಾರತವು ಸಾರ್ವಕಾಲಿಕ ಕ್ರೀಡೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಲೇ ಇರುತ್ತದೆ. ಮತ್ತು ವಿವಿಧ ರೀತಿಯ ಕ್ರೀಡೆಗಳನ್ನು ಉತ್ತೇಜಿಸುತ್ತದೆ.
ಭಾರತವು ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲು ಇದು ಕಾರಣವಾಗಿದೆ. ಈ ದಿನವನ್ನು ಆಚರಿಸಲು ಪ್ರಮುಖ ಕಾರಣವೆಂದರೆ ಆಗಸ್ಟ್ ೨೯ ಭಾರತೀಯ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾಗಿದೆ. ಈ ಕಾರಣಕ್ಕಾಗಿ, ಭಾರತದಲ್ಲಿ ಪ್ರತಿ ವರ್ಷ ಆಗಸ್ಟ್ ೨೯ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ” ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯ ಮೇಲೆ ಸುರೇಂದ್ರ ಭಂಡಾರಿ, ಸದಸ್ಯರು, ಕ್ರೀಡಾ ಸಮಿತಿ ಮತ್ತು ಉಪಪ್ರಾಚಾರ್ಯರಾದ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತರ ಕಾಲೇಜು ಮತ್ತು ವಿಶ್ವವಿದ್ಯಾಲಯ ಮಟ್ಟದಲ್ಲಿ ವಿವಿಧ ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಕ್ರೀಡಾ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕು.ಸವಿತಾ ಇವರು
ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರೆ, .ಹೀನಾ ಬೇಗಂ ನಿರೂಪಿಸಿದರೆ, ರೇಣುಕಾ ಪಾಟೀಲ್ ಸ್ವಾಗತಿಸಿದರೆ, ಪ್ರವಲ್ಲಿಕಾ ವಂದಿಸಿದರು.