ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ

ಗುಬ್ಬಿ, ಜು. ೩೦- ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಎಲ್ಲ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ತಿಳಿಸಿದರು.
ತಾಲ್ಲೂಕಿನ ಹಾಗಲವಾಡಿಯಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸರ್ವೋತ್ತಮುಖ ಅಭಿವೃದ್ದಿಗೆ ಕ್ರೀಡೆ ಸಹಕಾರಿಯಾಗಲಿದ್ದು, ಪ್ರತಿಯೊಬ್ಬರು ಸಹ ಕ್ರೀಡೆಯಲ್ಕಿ ಭಾಗವಹಿಸಬೇಕು. ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದ ಶಾಲೆಗಳಲ್ಲಿ ಕ್ರೀಡೆಗಳು ನಡೆದಿರಲಿಲ್ಲ. ಮಕ್ಕಳು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದು ಸುಮಾರು ಶಾಲೆಗಳಿಂದ ಕ್ರೀಡಾಕೂಟಕ್ಕೆ ಭಾವಹಿಸಿರುವುದು ಸಂತಸ ತಂದಿದೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಗುಬ್ಬಿ ತಾಲ್ಲೂಕಿನಲ್ಲಿ ಬಹುತೇಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಇಲ್ಲ. ಸರ್ಕಾರ ಕೂಡಲೇ ಗಮನ ಹರಿಸಬೇಕು. ಶಿಕ್ಷಣ ಸಚಿವರು ಕೂಡಾ ಗ್ರಾಮೀಣ ಭಾಗದ ಶಾಲೆಗಳ ಮೇಲೆ ನಿಗವಹಿಸಬೇಕು. ದೈಹಿಕ ಶಿಕ್ಷಕರನ್ನು ಪ್ರತಿ ಶಾಲೆಗೂ ನೀಡದರೆ ಇನ್ನೂ ಕೂಡಾ ಮಕ್ಕಳು ಕ್ರೀಡೆಯಲ್ಲಿ ಆಸಕ್ತಿ ಹೊಂದುತ್ತದೆ. ಸರ್ಕಾರ ಕೊಡಲೇ ಶಿಕ್ಷಕರನ್ನು ನೇಮಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜು ಮಾತನಾಡಿ, ಮಕ್ಕಳಿಗೆ ವಿದ್ಯಾಭ್ಯಾಸ ಎಷ್ವು ಮುಖ್ಯನೋ ಕ್ರೀಡೆಯು ಸಹ ಅಷ್ಠೇ ಮುಖ್ಯ. ಎರಡರಲ್ಲೂ ಸಹ ಮಕ್ಕಳು ಆಸಕ್ತಿ ತೋರಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮಕ್ಕಳು ಕ್ರೀಡೆಯಲ್ಲಿ ಮುಂದೆ ಬರಬೇಕು. ಸರ್ಕಾರ ಸಾಕಷ್ವು ಸೌಲಭ್ಯಗಳನ್ನು ಸರ್ಕಾರಿ ಶಾಲೆಗೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದ ಸಾಕಷ್ವು ಮಂದಿ ಸರ್ಕಾರಿ ಕೆಲಸಗಳಲ್ಲಿದ್ದಾರೆ. ಆದ್ದರಿಂದ ನಾವೆಲ್ಲರೂ ಸಹ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಓದಿಸಬೇಕು ಎಂದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ, ಎಸ್‌ಡಿಎಂಸಿ ಅಧ್ಯಕ್ಷ ಈರಣ್ಣ, ಶಿವರಾಜು, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಂತರಾಜು, ದೈಹಿಕ ಶಿಕ್ಷಣಾಧಿಕಾರಿ ಚಂದ್ರಮ್ಮ, ಸಿಆರ್‌ಪಿ ಸವಿತಾ, ಕಾರ್ಯದರ್ಶಿ ಕುಮಾರ್, ಮುಖ್ಯ ಶಿಕ್ಷಕ ರಂಗಸ್ವಾಮಿ, ಶಿಕ್ಷಕರಾದ ಜ್ಯೋತಿ, ಚನ್ನಬಸವರಾಧ್ಯ, ಮುಖಂಡರಾದ ಕೃಷ್ಣಜೇಟ್ಟಿ, ನಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.