ಕ್ರೀಡೆಯಿಂದ ಆರೋಗ್ಯ ವೃದ್ಧಿ

ನರೇಗಲ್ಲ,ನ23: ಇಂದಿನ ಯುವಕರು ದುಶ್ಚಟಗಳಿಗೆ ದಾಸರಾಗದೆ ದೇಶಿಯ ಕ್ರೀಡೆಗಳತ್ತ ಗಮನ ಹರಿಸಬೇಕು ಅದರಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಪಿಡಿಓ ಅಮೀರ್ ನಾಯಕ್ ಹೇಳಿದರು.

ಸಮೀಪದ ಅಬ್ಬಿಗೇರಿ ಗ್ರಾಮ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಅವರು ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ಭಾಗವಹಿಸುವದು ಮುಖ್ಯ ಸೋಲು ಗೆಲುವಲ್ಲಾ ಇಂದಿನ ಸೋಲು ಮುಂದಿನ ಗೆಲುವಾಗುವದು ಹಾಗೂ ಯುವಕರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ ಇಂದಿನ ಕ್ರೀಡಾಕೂಟದಲ್ಲಿ ಎಲ್ಲರೂ ಹುಮ್ಮಸ್ಸಿನಿಂದ ಭಾಗವಹಿಸಿ ನಿರ್ಣಾಯಕರು ನೀಡುವ ತಿರ್ಪಿಗೆ ಗೌರವ ಕೋಡಿ ಇಂತಹ ಕ್ರೀಡಾಕೂಟಗಳು ಮನಸ್ಸುಗಳನ್ನು ಬೆರೆಯುವ ಕೇಂದ್ರಗಳಾಗಬೇಕು ಎಂದರು.

ಗ್ರಾ.ಪಂ ಅಧ್ಯಕ್ಷೆ ಶಿದ್ದಮ್ಮ ಶಿವಪೂಜಿ, ಉಪಾಧ್ಯಕ್ಷ ದೇವಪ್ಪ ಜಂತ್ಲಿ, ಡಾ. ಆರ್.ಬಿ. ಬಸವರಡ್ಡೇರ, ಬಸವರಾಜ ವೀರಾಪೂರ ಸೇರಿದಂತೆ ಗ್ರಾ.ಪಂ ಸರ್ವ ಸದಸ್ಯರು ಹಾಗೂ ವಿದ್ಯಾರ್ಥಿಗಳು, ಅಂಗನವಾಡಿ ಸಿಬ್ಬಂದಿಗಳು,ಆರೋಗ್ಯ ಇಲಾಖೆ ಸಿಬ್ಬಂದಿಗಳು,ಊರಿನ ಮಾಜಿ ಕುಸ್ತಿ ಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.