
(ಸಂಜೆವಾಣಿ ವಾರ್ತೆ)
ವಿಜಯಪುರ: ಆ.3:ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರಿ?ಡಾ ಚಟುವಟಿಕೆಗಳಲ್ಲಿ ಬಾಗವಹಿಸಿ ದೆ?ಹಿಕವಾಗಿ ಶ್ರಮಿಸಿದಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಗುಣಕಿ
ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ ಎನ್ ಬಿದರಿ ಹೇಳಿದರು.
ಅವರು ತಾಲೂಕಿನ ಗುಣಕಿ ಗ್ರಾಮದ ವೀರರಾಣಿ ಕಿತ್ತೂರು ಚೆನ್ನಮ್ಮ ಪ್ರೌಢಶಾಲೆಯಲ್ಲಿ ಜರುಗಿದ ಗುಣಕಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ,ಕ್ರೀಡೆಗಳು ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆಯನ್ನು
ಮೂಡಿಸುವಲ್ಲಿ ಸಫಲವಾಗಿವೆ ಹಾಗೂ ಮನಸ್ಸಿಗೆ ಮುದ ನೀಡುತ್ತವೆ ಎಂದು ಹೇಳಿದರು.ಜೊತೆಗೆಕ್ರೀಡಾಕೂಟದ ಸಂಪೂರ್ಣ ಜವಾಬ್ದಾರಿ ವಹಿಸಿದ್ದರು. ಗುಣಕಿ ಕ್ಲಸ್ಟರ್ ಸಿ ಆರ್ ಪಿ ಈರಣ್ಣ ಬಂಡೆ ಮಾತನಾಡಿ,ಕ್ರಿ?ಡಾಕೂಟಗಳು ವಿದ್ಯಾರ್ಥಿಗಳ ಮಧ್ಯೆ ಸ್ನೆ?ಹ ಬಾಂಧವ್ಯವನ್ನು ಬೆಳೆಸುತ್ತವೆ. ಪರಸ್ಪರ ಹೊಂದಾಣಿಕೆ, ನಾಯಕತ್ವ ಗುಣಗಳನ್ನು ಬೆಳೆಸುತ್ತವೆ ಎಂದು ತಿಳಿಸುತ್ತಾ,ಮಕ್ಕಳ ದೈಹಿಕ ಬೆಳವಣಿಗೆಗೆ ಕ್ರೀಡೆ ಅತೀ ಅವಶ್ಯ.ಶಾಲಾ ಹಂತದಲ್ಲೇ ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಸೃಧೃಡರಾಗುತ್ತಾರೆಂದು ಅಭಿಪ್ರಾಯಪಟ್ಟರು.
ಮುಖ್ಯ ಶಿಕ್ಷಕ ಆರ್ ಎಸ್ ಪಾದಗಟ್ಟಿ,ಇ ಜಿ ರಾಠೋಡ, ಸಿ ಬಿ ಬೆಳ್ಳನವರ, ಜಿ ಆರ್ ಪಾಟೀಲ, ಸೇರಿದಂತೆ ಶಾಲೆಯ ಎಲ್ಲ ಶಿಕ್ಷಕರು ಮತ್ತು ಮಕ್ಕಳು ಕ್ರೀಡಾಕೂಟದಲ್ಲಿ
ಭಾಗವಹಿಸಿದ್ದರು.ಶಿಕ್ಷಕ ತಂಬಾಕೆ,ನಡುವಿನಮನಿ ಕಾರ್ಯಕ್ರಮ ನಿರ್ವಹಿಸಿದರು. ಕ್ರೀಡಾಕೂಟದಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಶೀಲ್ಡ್ ಗಳನ್ನು ವಿತರಿಸಲಾಯಿತು.