ಕ್ರೂಸರ್-ಬೈಕ್ ಡಿಕ್ಕಿ: ತಂದೆ-ಮಗಳು ಸಾವು

ವಿಜಯಪುರ,ನ.11-ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ರಸ್ತೆಯಲ್ಲಿ ನಡೆದಿದೆ.
ರಮೇಶ ನಾಟಿಕಕಾರ (45) ಮಗಳು ಖುಷಿ (8) ಮೃತಪಟ್ಟವರು.
ತಾಯಿ ಶ್ರೀದೇವಿಗೆ ಗಂಭೀರವಾಗಿ ಗಾಯಗಳಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತರು ಬಸವನ ಬಾಗೇವಾಡಿ ತಾಲ್ಲೂಕಿನ ಬೂದಿಗಾಳ ಗ್ರಾಮದವರು ಎಂದು ತಿಳಿದು ಬಂದಿದೆ.
ಬಾಗೇವಾಡಿ ಮೂಲಕ ಪತಿ, ಪತ್ನಿ ಹಾಗೂ ಮಗಳು ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿಗೆ ಬಂದ ಕ್ರೂಸರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪೆÇಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.