ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

ಗುರುಮಠಕಲ್:ಸೆ.5: ಸಮಗ್ರ ಶಿಕ್ಷಣ ಇಲಾಖೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಯಾದಗಿರಿ ಸಮೂಹ ಸಂಪನ್ಮೂಲ ಕೇಂದ್ರ ಪುಟಪಾಕ್ 2022- 23ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಸ್ಥಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಂತಪುರ ತಾಲೂಕಿನ ಕ್ಲಸ್ಟರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದಂತಪುರ ಗ್ರಾಮದಲ್ಲಿ ದಿನಾಂಕ 2-09-2022ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಂಡ್ರಿಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಆನಂದ್ ಕುಮಾರ್ ಅವರು ಇಂತಹ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಹುಮ್ಮಸ್ಸಲು ಸಹಾಯವಾಗುತ್ತದೆ ಕಾರ್ಯಕ್ರಮವನ್ನು ಆಯೋಜಿಸಿದ ಶಿಕ್ಷಕ ಬಂಧುಗಳಿಗೆ ಹಾಗೂ ಇಲಾಖೆಗೆ ಧನ್ಯವಾದಗಳು ತಿಳಿಸಿದರು. ಕಾರ್ಯಕ್ರಮದಲ್ಲಿ ಸರಕಾರ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ನೀರೇಟಿ ಅವರು ಮಾತನಾಡುತ್ತಾ ಸೂಕ್ತ ಪ್ರತಿಭೆಯನ್ನು ಗುರುತಿಸಿ ತಾಲೂಕು ಮಟ್ಟಕ್ಕೆ ಕಳುಹಿಸಬೇಕು ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಚಂಡ್ರಿಕಿ ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸದಸ್ಯರು ವಲಯ ಸಂಪನ್ಮೂಲ ವ್ಯಕ್ತಿ. ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ರೆಡ್ಡಿ ಪೆÇಲೀಸ್ ಪಾಟೀಲ್. ಸದಸ್ಯರು. ಗ್ರಾಮದ ಶಿಕ್ಷಣ ಪ್ರೇಮಿಗಳು ವಿವಿಧ ಶಾಲೆಯ ಮುಖ್ಯ ಗುರುಗಳು. ಸಹ ಶಿಕ್ಷಕರು ವಿವಿಧ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು. ಶಿಕ್ಷಕರಾದ ಮಹೇಶ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸಂಪನ್ಮೂಲ ವ್ಯಕ್ತಿ ಸೈಯದ್ ಬಾಬಾ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಜೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಬಹುಮಾನವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಗುರುಮಟ್ಕಲ್ ತಾಲೂಕ ಘಟಕದ ವತಿಯಿಂದ ಅಧ್ಯಕ್ಷರಾದ ರಾಜಲಿಂಗಪ್ಪ ಸಜ್ಜನ್. ಉಪಾಧ್ಯಕ್ಷರಾದ ಕನ್ನಯ್ಯ ಪಡಿಗೆ ಗುರುಮಿಟ್ಕಲ್ ಹಾಗೂ ಮಹೇಶ್ ಗಾಜರಕೋಟ ಅವರು ಸಂಗೀತ ಕಾರ್ಯಕ್ರಮವನ್ನು ನೀಡಿದರು ತದನಂತರ ಸರ್ವರಿಗು ಊಟದ ವ್ಯವಸ್ಥೆ ಮಾಡಲಾಗಿತ್ತು ಕಾರ್ಯಕ್ರಮ ಯಶಸ್ವಿ ಗೊಳಿಸಿದರು.