“ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ”

ಬಿಡುಗಡೆಗೂ ಪೂರ್ವದಲ್ಲೇ ಶೀರ್ಷಿಕೆ ಮೂಲಕವೇ ಜನಪ್ರಿಯವಾಗಿರುವ ಚಿತ್ರ “ಕ್ಷಮಿಸಿ‌‌ ನಿಮ್ಮ ಖಾತೆಯಲ್ಲಿ ಹಣವಿಲ್ಲ”‌.

ಸಾಗರ, ಸಿಗಂಧೂರು, ಬೆಂಗಳೂರಿನ ಸುಂದರ ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರಕ್ಕೆ ಬೆಂಗಳೂರಿನ ಖ್ಯಾತ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದೆ.‌ ಕೆಲವೆ ದಿನಗಳಲ್ಲಿ ಪ್ರಥಮಪ್ರತಿ‌ ಸಿದ್ದವಾಗಲಿದೆ. ಸಿಲ್ಕ್ ಮಂಜು ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಪತ್ರಕರ್ತ ವಿನಾಯಕ ಕೋಡ್ಸರ ನಿರ್ದೇಶನದ ಚೊಚ್ಚಲ ಚಿತ್ರವಿದು‌. ಹಾಸ್ಯಮಯ ಕಥಾಹಂದರ ಹೊಂದಿರುವ ಚಿತ್ರಕ್ಕೆ

ಪ್ರಜ್ವಲ್ ಪೈ ಸಂಗೀತ ನೀಡಿದ್ದಾರೆ. ರವೀಂದ್ರ ಜೋಶಿ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಂದ ಕಿಶೋರ್ ಎನ್ ರಾವ್ ಛಾಯಾಗ್ರಹಣ ಹಾಗೂ ರಾಹುಲ್ ವಸಿಷ್ಠ ಸಂಕಲನವಿರುವ ಈ‌ ಚಿತ್ರದ ಹಾಡುಗಳನ್ನು ವಿಶ್ವಜಿತ್ ರಾವ್ ಹಾಗೂ ತ್ರಿಲೋಕ್ ತ್ರಿವಿಕ್ರಂ ರಚಿಸಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ವೇಣು ಹಸ್ರಾಳಿ ಬರೆದಿದ್ದಾರೆ.

ನಿಜಜೀವನದ ಸತಿಪತಿ ದಿಗಂತ್ ಐಂದ್ರಿತಾ ರೇ ಈ ಚಿತ್ರದಲ್ಲಿ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟಿ‌ ಉಮಾಶ್ರೀ, ರಂಜನಿ ರಾಫವನ್, ಪಿ.ಡಿ.ಸತೀಶ್‌ ಚಂದ್ರ, ಪ್ರಕಾಶ್ ತುಮ್ಮಿನಾಡ್ ಹಾಗೂ ನೀನಾಸಂನ ಹಲವು ಕಲಾವಿದರು ‌ಈ ಚಿತ್ರದ ತಾರಾಬಳಗದಲ್ಲಿದ್ದಾರೆ.