ಕ್ಷಯರೋಗಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್‌ಗಳ ವಿತರಣೆ

ದಾವಣಗೆರೆ.ಜ.೧೪; ಉತ್ತರ ವಿಧಾನಸಭಾ ಕ್ಷೇತ್ರದ ದೊಡ್ಡಬಾತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟಿçÃಯ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರದಲ್ಲಿ ಲೋಕಿಕೆರೆ ನಾಗರಾಜ್  ಭಾಗವಹಿಸಿ, ನೂರು ಕ್ಷಯ ರೋಗಿಗಳನ್ನು ದತ್ತು ಪಡೆಯುವುದರ ಮೂಲಕ ಪೌಷ್ಠಿಕಾಂಶವುಳ್ಳ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಲೋಕಿಕೆರೆ ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಮಾಜಿ ಗ್ರಾ.ಪಂ. ಅಧ್ಯಕ್ಷರಾದ ಬಾತಿ ವೀರೇಶ್, ಬಿಜಿಪಿ ಮುಖಂಡರಾದ ನಾಗರಾಜ್, ಸತ್ಯಪ್ಪ ಹಾಗೂ ಆರೋಗ್ಯ ಅಧಿಕಾರಿಗಳು ಸೇರಿದಂತೆ ಗ್ರಾಮದ ಸಮಸ್ತ ನಾಗರೀಕರು ಉಪಸ್ಥಿತರಿದ್ದರು.