
(ಸಂಜೆವಾಣಿ ವಾರ್ತೆ)
ನವಲಗುಂದ,ಆ3 : ಮೂರು ವಾರಕ್ಕಿಂತ ಹೆಚ್ಚು ಸಮಯ ಕೆಮ್ಮು ಇದ್ದರೆ ಕೂಡಲೇ ಸ್ಥಳೀಯ ಪ್ರಾಥಮಿಕ ಕೇಂದ್ರಕ್ಕೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕೆಮ್ಮು ನಿರ್ಲಕ್ಷ್ಯ ವಹಿಸದೆ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆದು ಗುಣಮುಖರಾಗ ಬೇಕು ಎಂದು ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಆರ್ ಕುಲಕರ್ಣಿ ಹೇಳಿದರು.
ಅವರು ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕಾ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಡೆದ ಕ್ಷಯರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೆ ವೇಳೆ ವಸತಿ ಶಾಲೆಯ 250ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಂಡರು. ಮತ್ತು ಜಾಗೃತಿ ಗಾಗಿ ಮಕ್ಕಳಿಂದ ಪಾಲಕರಿಗೆ ಪತ್ರವನ್ನು ಬರೆಸಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸುಭಾಷ್ ಮಂಗಳಿ, ಶರಣಪ್ಪ, ಸುನಿಲ್, ಲಕ್ಷ್ಮಿ, ಭುವನೇಶ್ವರಿ ತಿರ್ಲಾಪುರ, ವಸತಿ ಶಾಲೆಯ ಪ್ರಾಂಶುಪಾಲರಾದ ಆನಂದ ಹಿರೇಲಿಂಗಪ್ಪನವರ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.