ಕ್ಷಯರೋಗ ನಿರ್ಮೂಲನೆ ಮಾಡಲು ನಾವೆಲ್ಲರೂ ಪಣ ತೊಡಬೇಕು:ಡಾ. ಗಿರೀಶ ಡಿ. ಬಡೋಲೆ

ಕಲಬುರಗಿ.ಜು.19:ಕ್ಷಯರೋಗ ಇದು ಒಂದು ಭಯಾನಕ ರೋಗವಿದ್ದು, ಈ ರೋಗವನ್ನು ಮುಕ್ತ ಮಾಡಲು ನಾವೆಲ್ಲರೂ ಪಣ ತೊಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ಡಿ. ಬಡೋಲೆ ಅವರು ಹೇಳಿದರು.

 ಸೋಮವಾರದಂದು ನಗರದ ಸೆಂಟ್ ಜಾನ್ಸ್ ಆಸ್ಪತ್ರೆ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ “ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ಡಿ. ಬಡೋಲೆ ಅವರು ಸಸಿಗೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮೈಕ್ರೋಸ್ಕೋಪ್‍ನಿಂದ ಕೆಮ್ಮು ಇದ್ದರೆ ಕಫ ಪರೀಕ್ಷೆ ಮಾಡಲಾಗುವುದು. ನಂತರ ನೆಗಿಟಿವ್ ಬಂದ ನಂತರ ಕ್ಷ-ಕಿರಣದೊಂದಿಗೆ ಪರೀಕ್ಷೆ ಮಾಡಲಾಗುವುದು. ಕಫ ಪರೀಕ್ಷೆಯಲ್ಲಿ ಪಾಸಿಟಿವ್À ಬಂದರೆ ಅಃಓಂಂಖಿ/ಖಿಡಿuಓಚಿಚಿಣ ಮುಖಾಂತರ ಉನ್ನತ ಮಟ್ಟದ ಯಂತ್ರದಲ್ಲಿ ಪರೀಕ್ಷೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ದೇಶದಲ್ಲಿ 2025ರ ವೇಳೆಗೆ ಕ್ಷಯರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಗುರಿ ಹೊಂದಲಾಗಿದ್ದು, ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಜುಲೈ 18 ರಿಂದ ಆಗಸ್ಟ 15ರ ವರೆಗೆ ಕಲಬುರಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಆಂದೋಲನ ನಿಮಿತ್ತ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ತಂಡಗಳು ಮನೆ-ಮನೆಗೆ ಬಂದಾಗ ಸಾರ್ವಜನಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ತಾಲ್ಲೂಕು ಆಸ್ಪತೆಗಳಲ್ಲಿ ಕ್ಷಯ ರೋಗ ಪತ್ತೆ ಮತ್ತು ಕ್ಷಯರೋಗದ ಔಷಧ, ಎಕ್ಸರೇ ಉಪಕರಣಗಳನ್ನು ಎಲ್ಲಾ ರೀತಿಯಿಂದ ಉಚಿತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ. ಡಾ. ಚಂದ್ರಕಾಂತ ನರಿಬೋಳಿ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಕೊಳಚೆ ಪ್ರದೇಶಗಳು, ಗಣಿಗಾರಿಕೆ ಪ್ರದೇಶಗಳಾದ ಶಹಾಬಾದ, ವಾಡಿ, ಚಿತ್ತಾಪೂರ, ಸೇಡಂ, ಆಯ್ಕೆ ಮಾಡಿಕೊಂಡಿದ್ದೇವೆ. ಎ.ಸಿ.ಎಫ್ ಕಾರ್ಯಕ್ರಮಕ್ಕೆ ಜಿಲ್ಲೆಯ 474 ಕ್ಷೇತ್ರಗಳು ಆಯ್ಕೆ ಮಾಡಿಕೊಂಡಿದ್ದೇವೆ. 577 ತಂಡ ನಿಯೋಜಿಸಲಾಗಿದ್ದು, ಅದರಲ್ಲಿ 727 ಆರೋಗ್ಯ ಸಿಬ್ಬಂದಿಗಳು ಮತ್ತು 1488 ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಲಾಗಿದೆ. ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 6,13.918 ಜನರನ್ನು ತಪಾಸಣೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಆಯ್ಕೆ ಮಾಡಿಕೊಂಡ ಒಟ್ಟು ಜನಸಂಖ್ಯೆಯ ಶೇಕಡ 5% ರಷ್ಟು 30.696 ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಪ್ರಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಮತ್ತು ಅಧೀಕ್ಷಕರಾದ ಡಾ. ಅಂಬಾರಯ ರುದ್ರವಾಡಿ ಮಾತನಾಡಿ, ಇದು ಕೋವಿಡ್‍ಕ್ಕಿಂತ ಭಯಾನಕ ರೋಗವಿದ್ದು, ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ ತಪಾಸಣೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಸಾರ್ವನಿಕರು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

  ಇದೇ ಸಂದರ್ಭದಲ್ಲಿ ಕ್ಷಯರೋಗ ನಿರ್ಮೂಲನೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.    

ಕಾರ್ಯಕ್ರಮದಲ್ಲಿ ಆರ್.ಸಿ.ಹೆಚ್. ಅಧಿಕಾರಿ ಡಾ. ಪ್ರಭುಲಿಂಗ ಮಾನಕರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಜಕುಮಾರ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ, ತಾಲ್ಲೂಕಾ ಆರೋಗ್ಯಧಿಕಾರಿ ಡಾ.ಮಾರುತಿರಾವ್ ಕಾಂಬಳೆ, ಸೆÀಂಟ್ ಜಾನ್ಸ್ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಮಲ್ಲೇರಾವ ಮಲ್ಲೆ, ಜಿಲ್ಲಾ ಡಿ.ಆರ್.ಟಿ.ಬಿ. ಸಮಾಲೋಚಕ ಮಂಜುನಾಥ ಕಂಬಳಿ ಮಠ, ಡ್ಯಾಪ್ಕೋ ಜಿಲ್ಲಾ ಮೇಲ್ವಿಚಾರಕ ಸೋಮಶೇಕರ ಮಾಲಿ ಪಾಟೀಲ, ಆಶಾ ಕಾರ್ಯಕರ್ತೆರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.