ಕ್ಷಯರೋಗ ಮುಕ್ತಗೊಳಿಸುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ 

ಸಂಜೆವಾಣಿ ವಾರ್ತೆ 

ಹರಿಹರ.ಆ.೩; ಕ್ಷಯ  ರೋಗ ಮುಕ್ತ ಮಾಡುವುದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದಾರೆ ಕ್ಷಯ ರೋಗವನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕ್ಷಯ ರೋಗ  ಅಧಿಕಾರಿ ಡಾ. ಗಂಗಾಧರ ಹೇಳಿದರು.ಜಿಲ್ಲಾ ಮತ್ತು ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ತಂಡ ಕ್ಷಯ ರೋಗ ಪತ್ತೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದವರು ಕ್ಷಯ ರೋಗ ಕೊರೊನಾಗಿಂತ ಅಪಾಯಕಾರಿ, ಇದು ಸಾಂಕ್ರಾಮಿಕ ರೋಗವಾಗಿದ್ದು, ಬೇರೆಯವರಿಗೂ ಹರಡುವ ಸಾಧ್ಯತೆ ಇರುತ್ತೆ ಕ್ಷಯ ರೋಗದ ಲಕ್ಷಣಗಳು ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಜ್ವರ, ಕಫ, ಕಫದಲ್ಲಿ ರಕ್ತ ಬೀಳುವುದು, ಎದೆ ನೋವು, ಬೆವರು ಬರುವುದು, ಹಸಿವು ಆಗದೆ ಇರುವುದು, ತೂಕ ಕಡಿಮೆ ಆಗುವ ಲಕ್ಷಣಗಳು ಕಂಡುಬರುವ ಪ್ರತಿಯೊಬ್ಬರೂ  ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಉಚಿತವಾಗಿ  ಪರೀಕ್ಷೆ ಮಾಡಿಸಿಕೊಳ್ಳಬೇಕು  ಕ್ಷಯ ರೋಗ ಪತ್ತೆಯಾದ ವ್ಯಕ್ತಿಗೆ ಆರು ತಿಂಗಳು ಉಚಿತ ಚಿಕಿತ್ಸೆ ನೀಡಿ ರೋಗ ಗುಣಪಡಿಸಲಾಗುವುದು’ ಜನರಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ರೋಗ ಹರಡುವುದನ್ನು ತಡೆಗಟ್ಟಬಹುದು. ಇದು ಕೇವಲ ಶ್ವಾಸಕೋಶ ಮಾತ್ರವಲ್ಲ, ಕಣ್ಣು, ಕಿವಿ ಸೇರಿ ದೇಹದ ಎಲ್ಲ ಭಾಗಗಳಿಗೂ ಹರಡುತ್ತದೆ. ಹಾಗಾಗಿ, ಸರಿಯಾದ ಚಿಕಿತ್ಸೆ ನೀಡುವುದರಿಂದ ಈ ರೋಗವನ್ನು ಗುಣಪಡಿಸಬಹುದು. ಕ್ಷಯ ರೋಗದಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶವಾಗಿದ್ದು ಮಧುಮೇಹದಿಂದ ಬಳಲುತ್ತಿದ್ದವರಲ್ಲಿ ಕ್ಷಯ ರೋಗ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ರೋಗವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಒಗ್ಗಟ್ಟಿನ ಶ್ರಮ ಅಗತ್ಯವಿದೆ. ಇದರ ಜತೆಗೆ ಸಾರ್ವಜನಿಕರು ಕೂಡಾ ಕ್ಷಯದ ಲಕ್ಷಣ ಕುರಿತು ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದುಕ್ಷಯ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೂ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಎಂದು ತಿಳಿಸಿದರು.ಎಕೆ ಕಾಲೋನಿ ಆಶ್ರಯ ಕಾಲೋನಿ ಗುತ್ತೂರು. ನಡೆದಂತೆ ನಗರ ಗ್ರಾಮೀಣ ಪ್ರದೇಶಗಳಲ್ಲಿ ತೆರಳಿದ ಆರೋಗ್ಯ ಇಲಾಖೆಯ ತಂಡ ಕ್ಷಯ ರೋಗ  ಪತ್ತೆ ಜಾಗೃತಿ ಅಭಿಯಾನ  ನಡೆಸಿದರು.ಜಿಲ್ಲಾ ಆರೋಗ್ಯ ಇಲಾಖೆಯ ಎಂವಿ ಹೊರೆಕೇರಿ. ಹರಿಹರ ಆರೋಗ್ಯ ಇಲಾಖೆಯ ರಕ್ಷಣಾಧಿಕಾರಿ ಎಂ ಉಮಣ್ಣ. ಮಂಜುನಾಥ್ ಸತೀಶ್. ಆಶಾ ಶೃತಿ ಸೇರಿದಂತ ಜಿಲ್ಲಾ ಮತ್ತು ಹರಿಹರ ತಾಲೂಕ್ ಆರೋಗ್ಯ ಇಲಾಖೆಯ ಅಧಿಕಾರಿಯ ಸಿಬ್ಬಂದಿ ವರ್ಗದವರು ಇದ್ದರು