ಕ್ಷಯ ಮುಕ್ತ ಭಾರತ ಕಟ್ಟೋಣ ಡಾ.ನಾಗರಾಜ ಕಾಟ್ವಾ

ಸಿಂಧನೂರು,ಮಾ.೨೪- ೨೦೨೫ ರೊಳಗೆ ಭಾರತವನ್ನು ಕ್ಷಯ ರೋಗ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲರು ಪಣ ತೊಡೋಣ ಇದಕ್ಕೆ ಸಾರ್ವಜನಿಕರ ಸಹಕಾರ ಬೇಕು ಎಂದು ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದಾಧಿಕಾರಿ ಡಾ.ನಾಗರಾಜ ಕಾಟ್ವಾ ಹೇಳಿದರು.
ನಗರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ, ಸಾರ್ವಜನಿಕ ಅರಿವು ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷಯ ರೋಗಕ್ಕೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆಯ ಜೊತೆಗೆ ಔಷಧಿ ನೀಡಲಾಗುತ್ತದೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಂಡು ಕ್ಷಯ ರೋಗ ನಿರ್ಮೂಲನೆ ಮಾಡಲು ಶ್ರಮಿಸಬೇಕು ಎಂದರು.
ಆಸ್ಪತ್ರೆಯಿಂದ ಹೊರಟ ಜಾಗೃತಿ ಜಾಥ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಆಶಾ ಕಾರ್ಯಕರ್ತೆಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಜಾಥದಲ್ಲಿ ಪಾಲ್ಗೊಂಡಿದ್ದರು.
ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕಾಟ್ಪಾ, ಡಾ.ವಿನೋತ, ಡಾ.ಮೋಕ್ಷ, ಹಿರಿಯ ಆರೋಗ್ಯ ಸಹಾಯಕರಾದ ಸಂಗನಗೌಡ, ಗೀತಾ ಹಿರೇಮಠ, ತ್ರಿವೇಣಿ, ನೀಸಾರ ಅಮೀದ್ ಸೇರಿದಂತೆ ಇತರರು ಜಾಥ ಕಾರ್ಯಕ್ರಮದಲ್ಲಿ ಭಾಗವಸಿದ್ದರು.