ಕ್ಷಯ ರೋಗಿಗಳಿಗೆ ಉಚಿತ ರೇಷನ್ ಕಿಟ್ ವಿತರಣೆ


ಬಳ್ಳಾರಿ,ಜು.06:
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಅಧ್ಯಕ್ಷರಾದ ಗೌರವಾನ್ವಿತ ರಾಜ್ಯಪಾಲರ ಕಚೇರಿಯಿಂದ ನಿ-ಕ್ಷಯ ಮಿತ್ರ ಯೋಜನೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ಪೌಷ್ಟಿಕ ಆಹಾರ ಧಾನವ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ.
ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಹಯೋಗದೊಂದಿಗೆ ಜಿಲ್ಲೆಯ 10 ಕ್ಷಯ ರೋಗಿಗಳಿಗೆ ಜುಲೈ ತಿಂಗಳ ಮಾಸಿಕ ರೇಷನ್ ಕಿಟ್‍ಗಳನ್ನು ಬುಧವಾರದಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಕಚೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಭಾರತಿಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಸದಸ್ಯರಾದ ಮೆಹಬೂಬ್ ಬಾಷಾ, ಎಂ. ವಲಿಬಾಷಾ, ರಾಮಾಂಜಿನೇಯಲು ಹಾಗೂ ಇತರರು ಇದ್ದರು.