ಕ್ಷಯ ರೋಗಿಗಳ ಸಭೆ

ಗಂಗಾವತಿ 22 : ಸ್ಥಳೀಯ ಉಪ ವಿಭಾಗ ಆಸ್ಪತ್ರೆಯಲ್ಲಿ ಕ್ಷಯರೋಗ ವಿಭಾಗದಿಂದ ಕ್ಷಯ ರೋಗಿಗಳ ಸಭೆ ಏರ್ಪಡಿಸಲಾಗಿತ್ತು.
ಆಡಳಿತಾಧಿಕಾರಿ ಡಾ. ಈಶ್ವರ ಸವಡಿ ಮಾತನಾಡಿ, ಕ್ಷಯರೋಗಿಗಳು ಸಮಯಕ್ಕೆ ಸರಿಯಾಗಿ ಪೌಷ್ಟಿಕ ಆಹಾರ ಸೇವನೆ ಜೊತೆಗೆ ಸಹವ್ಯಾದಿ ಸೋಂಕುಗಳ ಪರೀಕ್ಷೆ ಮತ್ತು ಚಿಕಿತ್ಸೆ ಮಾಡಿಸಿ ಮಾತ್ರೆಗಳನ್ನು ಸೇವಿಸುವುದರಿಂದ ಕ್ಷಯ ರೋಗವನ್ನು ಸಂಪೂರ್ಣ ತೊಡಗಿಸಬಹುದು. ನಗರದಲ್ಲಿ ಕರೋನ ಎರಡನೇ ಅಲೆ ಹೆಚ್ಚಾಗಿರುವುದರಿಂದ ಎಲ್ಲರೂ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು
ಕ್ಷಯರೋಗ ಪರಿವೀಕ್ಷಕ ಮಲ್ಲಿಕಾರ್ಜುನ ಮಾತನಾಡಿ, ಕ್ಷಯ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಅವಶ್ಯ ಎಂದರು.
ಬಳಿಕ ರಂಜಾನ್ ಹಬ್ಬದ ಹಿನ್ನೆಲೆ ಅಂಗನವಾಡಿ ಶಿಕ್ಷಕಿ ಮಮ್ತಾಜ್ ಬೇಗಂ ಅವರು ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರದ ಕೀಟ್ ಗಳನ್ನು ವಿತರಿಸಿದರು.
ಈ ವೇಳೆ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಹುಸೇನ್ ಬಾಷಾ, ಜಿಲ್ಲಾ ಮೇಲ್ವಿಚಾರಕ ದಾನನಗೌಡ ,ಕ್ಷಯ ರೋಗ ಪರೀಕ್ಷಕ ರಾಘವೇಂದ್ರ ಜೋಶಿ, ಕರ್ನಾಟಕ ಆರೋಗ್ಯ ಸಂವರ್ಧನ ಸಂಸ್ಥೆಯ ಹನುಮಂತಪ್ಪ, ಕಾಸಿಂಬಿ ಇದ್ದರು.