ಕ್ಷಯ ರೋಗ ಪೀಡಿತರ ಬಗ್ಗೆ ಅಸಡ್ಡೆ ಮನೋಭಾವನೆ ಸಲ್ಲದು

ಹೊನ್ನಾಳಿ.ಡಿ.೧೮; ಕ್ಷಯ ರೋಗ ಒಂದು ಶಾಪವಲ್ಲ. ಸಕಾಲದಲ್ಲಿ ಸೂಕ್ತ ಪರೀಕ್ಷೆಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡರೆ ಈ ರೋಗದಿಂದ ಹೊರಬರಬಹುದು. ಕ್ಷಯ ರೋಗ ಪೀಡಿತ ರೋಗಿಗಳ ಬಗ್ಗೆ ಅಸಡ್ಡೆ ಮನೋಭಾವನೆ ತಾಳದೆ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಜೊತೆಗೆ ಅಗತ್ಯ ಚಿಕಿತ್ಸೆ ಕೊಡಿಸಬೇಕು ಎಂದು ತಹಸೀಲ್ದಾರ್ ತುಷಾರ್ ಬಿ.ಹೂಸೂರು ಹೇಳಿದರು.ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯ ರೋಗ ನಿವಾರಣಾ ಘಟಕದ ವತಿಯಿಂದ  ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲಾ ಕ್ಷಯ ರೋಗ ನಿವಾರಣಾ ಕೇಂದ್ರದ ಅಧಿಕಾರಿ ಗಂಗಾಧರ್ ಕ್ಷಯ ರೋಗದ ಬಗ್ಗೆ ಮಾಹಿತಿ ನೀಡಿದರು.ದಾವಣಗೆರೆಯ ಎಸಿಎಫ್ ಕಲಾತಂಡದ ಕಲಾವಿದರು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಕ್ಷಯ ರೋಗದ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸ ಮಾಡಿದರು.ಮಹಾಲಿಂಗಪ್ಪ, ಷರೀಫ್, ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಗಿರೀಶ್, ತಾಲೂಕಿನ ಹಿರಿಯ ಆರೋಗ್ಯ ಸಹಾಯಕ ಶಿವಪದ್ಮ, ಕಿರಿಯ ಆರೋಗ್ಯ ಸಹಾಯಕಿಯರಾದ ನಾಗರತ್ನಮ್ಮ, ಭಾಗ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.