ಕ್ಷುಲ್ಲಕ ವಿಚಾರಕ್ಕೆ ಜಗಳ ದಂಪತಿ ಆತ್ಮಹತ್ಯೆಯಲ್ಲಿ ಅಂತ್ಯ

ಮೈಸೂರು,ಏ.19- ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಗಲಾಟೆ ದಂಪತಿ ಆತ್ಮಹತ್ಯೆಯಲ್ಲಿ ಕೊನೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ.
ಕೃಷ್ಣಾಪುರದ ಚಂದ್ರಶೇಖರ (30) ಕವಿತಾ (18) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಇವರು, ಬಹಳ ಅನ್ಯೋನ್ಯವಾಗಿದ್ದರು.
ಸಣ್ಣ ವಿಚಾರಕ್ಕೆ ನಿನ್ನೆ ಇಬ್ಬರ ನಡುವೆ ಗಲಾಟೆ ನಡೆದಿದ್ದು ಮನನೊಂದು ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.