ಕ್ಷೇತ್ರದಲ್ಲಿ ಕುಡಿಯುವ ನೀರು. ರಸ್ತೆ, ಶಾಲಾ ಕಟ್ಟಡ, ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಶಾಸಕ ಲಕ್ಷ್ಮಣ ಸವದಿ

ಅಥಣಿ :ಡಿ.24: ಭವಿಷ್ಯದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಿರಲು ಮಹತ್ವಾಕಾಂಕ್ಷಿ ಜನಜೀವನ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುವುದನ್ನು ತಪ್ಪಿಸಲು ಈ ಯೋಜನೆಯ ಮೂಲಕತ ಮನೆ ಮನೆಗೆ ಶುದ್ಧ ನೀರು ಪೂರೈಸಲಾಗುತ್ತಿದ್ದು, ಈ ಕಾಮಗಾರಿಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು. ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ 351 ಲಕ್ಷ ರೂಗಳ. ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಸರ್ಕಾರ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದೆ ಈ ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಗ್ರಾಮದಲ್ಲಿರುವ ಪ್ರತಿಯೊಂದು ಮನೆಗೆ ನೀರು ತಲುಪಬೇಕು ಗುತ್ತಿಗೆದಾರರು ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದ ಅವರು
ಕ್ಷೇತ್ರದ ಹಲವು ಗ್ರಾಮಗಳಲ್ಲಿ ರಸ್ತೆ, ಶಾಲಾ ಕಟ್ಟಡ, ಚರಂಡಿ ಸೇರಿದಂತೆ ಇತರೆ ಹಲವು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಗುರಿ ಹೊಂದಲಾಗಿದೆ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು. ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಗ್ರಾಮಸ್ಥರು ಒಗ್ಗಟ್ಟಿನಿಂದ ಬಂದು ಯಾವ ಕೆಲಸವಾಗಬೇಕು ಎಂಬುದನ್ನು ನನಗೆ ತಿಳಿಸಬೇಕು. ಅದನ್ನು ಶಿರಸಾವಹಿಸಿ ಮಾಡುತ್ತೇನೆ. ಗ್ರಾಮಸ್ಥರೆಲ್ಲರೂ ಸಹಕಾರ ನೀಡಿದರೆ ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ, ಮಲ್ಲೆವ್ವನಮಡ್ಡಿಯಲ್ಲಿನ ಸರ್ಕಾರಿ ಕನ್ನಡ ಶಾಲೆಯ 2 ಕೊಠಡಿಗಳನ್ನು ಉದ್ಘಾಟಿಸಿದರು.
ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ತುಕಾರಾಮ ದೇವಕಾತೆ. ಮುಖಂಡರಾದ
ನೂರಅಹ್ಮದ ಡೊಂಗರಗಾಂವ. ಸಂಗಯ್ಯಾ ಪೂಜಾರಿ. ಸದಾಶಿವ ಹರಪಾಳೆ. ಭರತ್ ಭಂಡಗರ. ಮಲಗೌಡಾ ಪಾಟೀಲ. ಶ್ರೀಕಾಂತ ಅಲಗೂರ. ಉಮ್ಮಯ್ಯಾ ಪೂಜಾರಿ. ದುಂಡಪ್ಪ ಡಂಬಳ. ಬಾಳು ಸರಗರ. ಹಣಮಂತ ಗಬ್ಬೂರ. ಸೇರಿದಂತೆ ಹಲವರು ಉಪಸ್ಥಿತರಿದ್ದರು.