
ಕೋಲಾರ,ಮೇ,೧೭-ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ರಿಗೆ ಮಾದಿಗ ಸಮುದಾಯದ ಬಂಧುಗಳು ಹೆಚ್ಚಿನ ರೀತಿಯಲ್ಲಿ ಮತ ಹಾಕುವ ಮೂಲಕ ಬೆಂಬಲಿಸಿದ್ದಾರೆ. ಅವರಿಗೆ ಮಾದಿಗ ಸಮುದಾಯದಿಂದ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮಾದಿಗ ಸಮುದಾಯದ ಮುಖಂಡ ಕರಡುಬಂಡೆ ವರದರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿ ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರವು ಸಮಗ್ರ ಅಭಿವೃದ್ಧಿಗಾಗಿ ದೇಶದಲ್ಲಿ ಬಿಜೆಪಿ ಪಕ್ಷದ ಜನವಿರೋಧಿ ನೀತಿಗಳ ವಿರುದ್ಧ ಹಾಗೂ ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಜನ ಬಯಸಿದ್ದರು ಅದರಂತೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಎಲ್ಲಾ ಜಾತಿ ದರ್ಮದ ಜನ ಬೆಂಬಲಿಸಿದ್ದಾರೆ ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಕ್ಷೇತ್ರದ ಅಭಿವೃದ್ಧಿಗಾಗಿ ನೂತನ ಶಾಸಕ ಕೊತ್ತೂರು ಮಂಜುನಾಥ್ ಶ್ರಮಿಸಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕೊತ್ತೂರು ಮಂಜುನಾಥ್ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಜೊತೆಗೆ ಎರಡು ಬಾರಿ ಶಾಸಕರಾಗಿದ್ದು ಅವರಿಗೆ ಸಚಿವರಾಗಿ ಮಾಡಿ ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ಕೇಂದ್ರ ಮಟ್ಟದ ವರಿಷ್ಠರನ್ನು ಒತ್ತಾಯಿಸಿದರು.
ಮಾದಿಗ ಸಮುದಾಯದ ಮುಖಂಡರಾದ ಮುನಿರಾಜು, ಆನಂದ್, ಪ್ರೇಮ್ ಸಂತೋಷ್, ಹರೀಶ್, ಕಾರ್ತಿಕ್ ಇದ್ದರು