ಕ್ಷೇತ್ರದ ಅಭಿವೃದ್ಧಿಗೆ ಈಶ್ವರ ಖಂಡ್ರೆ ಹಗಲಿರಳು ಶ್ರಮ

ಭಾಲ್ಕಿ:ಜ.16: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕ ಈಶ್ವರ ಖಂಡ್ರೆ ಅವರು ಹಗಲಿರಳು ಶ್ರಮಿಸುತ್ತಿದ್ದಾರೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‍ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಆಶಯ ವ್ಯಕ್ತಪಡಿಸಿದರು. ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ ಶಾಸಕ ಈಶ್ವರ ಖಂಡ್ರೆ ಅವರ 60ನೇ ಜನ್ಮದಿನದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕ್ಷೇತ್ರದ ಶಾಸಕರಾಗಿ ಈಶ್ವರ ಖಂಡ್ರೆ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅನೇಕ ಅಭಿವೃದ್ಧಿಪರ ಕೆಲಸಗಳನ್ನು ಕೈಗೊಂಡಿದ್ದಾರೆ. ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಶಾಶ್ವತ ಕುಡಿವ ನೀರಿನ ಯೋಜನೆ ರೂಪಿಸಿ ಪಟ್ಟಣದಲ್ಲಿನ ಕುಡಿವ ನೀರಿನ ಸಮಸ್ಯೆ ಬಗೆ ಹರಿಸಿದ್ದಾರೆ. ಸಚಿವರಾಗಿಯು ಅವರು ಜಿಲ್ಲೆಗೆ ಸಾಕಷ್ಟು ಅನುದಾನ ಕೊಟ್ಟಿದ್ದಾರೆ.

ಈಶ್ವರ ಖಂಡ್ರೆ ಅವರಲ್ಲಿ ಅಭಿವೃದ್ಧಿಯ ದುಡಿತವಿದೆ. ಸಂಘಟನಾ ಶಕ್ತಿ ಇದೆ. ಆ ಕಾರಣಕ್ಕಾಗಿಯೇ ಅವರು ಇಂದು ರಾಜ್ಯ ಮಟ್ಟದ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ರಾಜ್ಯ ರಾಜಕೀಯ ಕ್ಷೇತ್ರದಲ್ಲಿ ಇನಷ್ಟು ಉತ್ತರೋತ್ತರವಾಗಿ ಬೆಳೆಯಲಿ. ಅವರಿಗೆ ವಿಶ್ವಗುರು ಬಸವಣ್ಣನವರು ಇನ್ನಷ್ಟು ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು.

ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಈಶ್ವರ ಖಂಡ್ರೆ ಅವರು ಹಗಲಿರಳು ದುಡಿಯುತ್ತಿದ್ದಾರೆ. ಯಾವುದೇ ಆಸೆ ಆಕಾಂಕ್ಷೆ ಇಲ್ಲದೇ ಕ್ಷೇತ್ರದ ಜನರ ಒಳಿತಿಗೆ ತಮ್ಮ ಜೀವನ ಮುಡಿಪಾಗಿಟ್ಟಿದ್ದಾರೆ. ಕ್ಷೇತ್ರವನ್ನು ಎಲ್ಲ ರಂಗದಲ್ಲಿ ಬೆಳಗಿಸಿದ್ದಾರೆ. ಶಾಸಕರು ತಮ್ಮ ಜನ್ಮದಿನವನ್ನು ಎಂದಿಗೂ ಅದ್ಧೂರಿಯಾಗಿ ಆಚರಿಸಿ ಕೊಂಡವರಲ್ಲ. ಅವರು ತಮ್ಮ ಸರಳತೆ ಮೂಲಕ ಜನರ ಮನ ಗೆದ್ದಿದ್ದಾರೆ ಎಂದು ತಿಳಿಸಿದರು.

ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಅನೀರಿಕ್ಷಿತವಾಗಿ ರಾಜಕೀಯ ಕ್ಷೇತ್ರಕ್ಕೆ ಬಂದಿರುವ ನನ್ನನ್ನು ಜನರು ಅತ್ಯಂತ ಪ್ರೀತಿ, ವಿಶ್ವಾಸದಿಂದ ನೋಡಿಕೊಂಡು ಸತತ ಮೂರು ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ. ಅಭಿವೃದ್ಧಿ ಕೆಲಸಗಳ ಮೂಲಕ ಜನರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಜನರು ತೋರಿಸುತ್ತಿರುವ ಪ್ರೀತಿ, ಅಭಿಮಾನ ಎಂದಿಗೂ ಮರೆಯುವುದಿಲ್ಲ. ಎಲ್ಲರ ಸಹಕಾರದೊಂದಿಗೆ ತಾಲೂಕು ಮಾದರಿಯಾಗಿ ಅಭಿವೃದ್ಧಿ ಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

ಮಹಾಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದರು. ಈ ಸಂದರ್ಭದಲ್ಲಿ ಡಾ.ಗೀತಾ ಈಶ್ವರ ಖಂಡ್ರೆ, ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಜಿಲ್ಲಾ ಕರವೇ ಅಧ್ಯಕ್ಷರಾದ ಸೋಮನಾಥ ಮುಧೋಳಕರ್, ಸಂಗಮೇಶ ಗುಮ್ಮೆ, ಪ್ರಥಮ ದರ್ಜೆ ಗುತ್ತಿಗೆದಾರ ಸಂಗಮೇಶ ಹುಣಜೆ ಮದಕಟ್ಟಿ, ರವಿ ಬೋರವೆಲ್ಸ್ ಮಾಲೀಕ ರವೀಂದ್ರ ಚಿಡಗುಪ್ಪೆ, ಗುತ್ತಿಗೆದಾರ ರಾಜಕುಮಾರ ಬಿರಾದಾರ್, ಪ್ರಭು ಡಿಗ್ಗೆ, ಸಿದ್ರಾಮ ತುಗಶೆಟ್ಟೆ ಸೇರಿದಂತೆ ಹಲವರು ಇದ್ದರು. ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಶಶಿಧರ ಕೋಸಂಬೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.