ಕ್ಷೇತ್ರದ ಅಭಿವೃದ್ಧಿಯತ್ತ ಧಾಪುಗಾಲು: ಅಶೋಕ್ ಮನಗೂಳಿ

ಸಿಂದಗಿ: ಫೆ.13: ಪಟ್ಟಣಕ್ಕೆ ಈಗಾಗಲೇ 49ಕೋಟಿ ರೂ. ವೆಚ್ಚದಲ್ಲಿ ಮನೆ ಮನೆಗೆ ನಳ ಸಂಪರ್ಕ ಕಾಮಗಾರಿಗೆ ಅನುದಾನ ಮಂಜೂರಾಗಿದೆ ನಗರೋತ್ತಾನ ಅಮೃತ 2 ಯೋಜನೆಯ ಅಡಿಯಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದಾಪುಗಲು ಹಾಕುತಿದ್ದೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಡಾ.ಬಿ.ಆರ್.ಅಂಬೇಡ್ಕರ್ ಆಟೋ ನಿಲ್ದಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ಮಹಾ ಜನತೆ ನನ್ನ ಮೇಲೆ ಇಟ್ಟಿರುವ ಭರವಸೆ ಹುಸಿಹೋಗದಂತೆ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಆಟೋ ಚಾಲಕರ ಮಾತು ಮಾಲೀಕರ ಬಹುದಿನಗಳ ಬೇಡಿಕೆ ಈಡೇರಿದೆ ಇದರ ಜೊತೆಗೆ ಶೀಘ್ರವಾಗಿ ಪಟ್ಟಣದಲ್ಲಿ ಮನೆ ಮನೆಗೆ ನಳ ಕೂಡಿಸಿ ನೀರು ಹರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದರು.
ನಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರ, ಎಂ.ಎ. ಖತೀಬ, ವೈ.ಸಿ. ಮಯೂರ ಮಾತನಾಡಿದರು.
ಇದೇ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಅಧ್ಯಕ್ಷ ಸಲೀಮ್ ಅಲ್ದಿ ಮಾತನಾಡಿ, ಸಿಂದಗಿ ನಗರದಲ್ಲಿ ಅನೇಕ ರಸ್ತೆಗಳು ಹದಿಗೆಟ್ಟಿದ್ದು, ಅದರಿಂದ ಆಟೋ ಚಲಾಯಿಸಲು ತುಂಬಾ ತೊಂದರೆ ಉಂಟಾಗುತ್ತಿದೆ. ಕಾರಣ ಶಾಸಕರು ಆದಷ್ಟೂ ಬೇಗ ನಗರದಲ್ಲಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು. ಶಾಲೆಯಲ್ಲಿ ಮೂಲಭೂತ ಸೌಕರ್ಯ, ರಸ್ತೆ ದುರಸ್ತಿ ಸೇರಿದಂತೆ ಅನೇಕ ಬೇಡಿಕೆಗಳನ್ನು ಹಾಕ್ಕೋತ್ತಾಯಿಸಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪಿಡಬ್ಲ್ಯೂಡಿ ಎಇಇ ತಾರಾನಾಥ ರಾಠೋಡ, ಮಂಜು ಬಿಜಾಪುರ, ಮುತ್ತು ಮುಂಡೇವಾಡಗಿ, ಪುರಸಭೆ ಕಿರಿಯ ಆರೋಗ್ಯ ಅಧಿಕಾರಿ ನಬಿರಸೂಲ್ ಉಸ್ತಾದ್, ಮಹಾಂತಗೌಡ ಪಾಟೀಲ್, ಪುರಸಭೆ ಸದಸ್ಯ ಬಸವರಾಜ ಯಾರನಾಳ, ಶಾಂತು ರಾಣಾಗೋಳ ಸೇರಿದಂತೆ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.