ಖಣದಾಳ ಶಾಲೆಗೆ ನಮೋಶಿ ಭೇಟಿ

ಕಲಬುರಗಿ,ಜ.3-ತಾಲೂಕಿನ ಖಣದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ಅವರು, ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ತೆಗೆದುಕೊಂಡ ಸುರಕ್ಷಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
ನಂತರ, ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ, ಕೊರೊನಾದಿಂದ ದೂರವಿರಲು ವಹಿಸಬೇಕಾದ ಎಚ್ಚರಿಕೆ ಕ್ರಮಗಳು, ಸೊಂಕಿನ ಬಗ್ಗೆ ಮಕ್ಕಳಲ್ಲಿರುವ ಆತಂಕ ಹಾಗೂ ಇತರೆ ಹಲವು ವಿಚಾರಗಳು ಕುರಿತು ಮಾಹಿತಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಬೊಮ್ಮನಹಳ್ಳಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವರ್ಗದವರು ಹಾಗೂ ಇತರರು ಉಪಸ್ಥಿತರಿದ್ದರು.