ಖರಾಬದಿನ್ನಿ ಗ್ರಾಮದಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ

ಮಾನ್ವಿ,ಏ.೦೪- ಜಿಲ್ಲಾ ಪಂಚಾಯತ, ಆರೋಗ್ಯ, ಕುಟುಂಬ ಕಲ್ಯಾಣ, ಕ್ಷೇಮ ಕೇಂದ್ರದ ವತಿಯಿಂದ ಖರಾಬದಿನ್ನಿಯ ಗ್ರಾಮದಲ್ಲಿ ಮೇ ೧೦ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಹಕ್ಕುನ್ನು ಚಲಾಯಿಸಲು ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಿ ಮತದಾರರ ಪ್ರತಿಜ್ಞಾ ವಿಧಿಯನ್ನು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಭೋಧಿಸಿದರು.
ನಂತರ ಮಾತಾನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ದೃಡವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ ಜನಾಂಗ ಜಾತಿ, ಮತ ಬಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ, ಸಮುದಾಯ ಆರೋಗ್ಯ ಅಧಿಕಾರಿಗಳು ಹನುಮಂತಪ್ಪ, ಅಂಗನವಾಡಿ ಕಾರ್ಯಕರ್ತೆಚನ್ನಮ್ಮ ಮಂಜುಳಾ, ಆಶಾ ಕಾರ್ಯಕರ್ತೆ ಅಮರಮ್ಮ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.