ಖರೀದಿ ಕೇಂದ್ರ ಪ್ರಸರಂಭಿಸಲು ಮನವಿ

ದಾವಣಗೆರೆ.ಜೂ.೮; ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತ ಮುಖ್ಯ ಬೆಳೆಯಾಗಿರುತ್ತದೆ.ಆದ್ದರಿಂದಕನಿಷ್ಟ ಬೆಲೆ ಯೋಜನೆಯಡಿ ಖರೀದಿ ಕೇಂದ್ರ ಪ್ರಾರಂಭಿಸ ಬೇಕೆಂದು ಒತ್ತಾಯಿಸಿ ಭಾರತೀಯ ಜನತಾ ಪಕ್ಷ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ನಾಗರಾಜ್ ಲೋಕಿಕೆರೆ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.