
ಬೆಂಗಳೂರು, ಜು. ೨೧- ಎಐಸಿಸಿ ಅಧ್ಯಕ್ಷರು, ಮಾಜಿ ಕೇಂದ್ರ ಸಚಿವರು ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕೀಯ ಮುತ್ಸದ್ಧಿಗಳಾದ ಮಲ್ಲಿಕಾರ್ಜುನ ಖರ್ಗೆಯವರು ಇಂದು ೮೨ನೇ ಹುಟ್ಟುಹಬ್ಬ ಆಚರಿಸಿ ಕೊಳ್ಳುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕರು ಹಾಗೂ ಪೌರ ಕಾರ್ಮಿಕರ ಹೋರಾಟಗಾರ ಎನ್. ವಿಜಯಕುಮಾರ್ ಸಿಂಹ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವರು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಮತ್ತಷ್ಟು ಅಧಿಕಾರ ದೊರೆತು ದೇಶದ ಜನರ ಸೇವೆ ಮಾಡಲಿ ಎಂದು ಬಿಬಿಎಂಪಿ ಪೌರಕಾರ್ಮಿಕರ ೪ನೇ ದರ್ಜೆ ನೌಕರರ ಸಂಘದ ಅಧ್ಯಕ್ಷರು, ಸಮುದಾಯದ ಮುಖಂಡರು ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ.