ಖರ್ಗೆ ಎಐಸಿಸಿ ನಾಯಕರಾಗಿ ಒಂದು ವರ್ಷಪೂರೈಸಿರುವುದು ಹೆಮ್ಮೆಯ ಸಂಗತಿ


ಸಂಜೆವಾಣಿ ವಾರ್ತೆ
ದಾವಣಗೆರೆ.ಅ.೨೯;ಹಿಂದುಳಿದ ವರ್ಗದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೇಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಳಿಸಿರುವುದು ಹೆಮ್ಮೆಯ ಸಂಗತಿ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಬಿ.ಎನ್. ವಿನಾಯಕ ಹರುಷ ವ್ಯಕ್ತಪಡಿಸಿದ್ದಾರೆ.ನೆಹರು-ಗಾಂಧಿ ಕುಟುಂಬದವರನ್ನು ಹೊರತು ಪಡಿಸಿ ಬೇರೆ ಯಾರಿಗೂ ಸಾಧ್ಯವಿಲ್ಲವೆಂಬ ನಂಬಿಕೆಯನ್ನು ಇದೇ ಮೊದಲ ಬಾರಿಗೆ ಹಿಂದುಳಿದ ವರ್ಗದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಹುಸಿಗೊಳಿಸಿ ಪಕ್ಷವನ್ನು ಬಿಕ್ಕಟ್ಟಿನಿಂದ ಗೆಲುವಿನ ಹಾದಿಯತ್ತ ಕೊಂಡೊಯ್ದಿರುವುದು ಇವರ ನಾಯಕತ್ವವನ್ನು ಸಾಬೀತು  ಪಡಿಸಿದೆ. ಇವರು ಅಧ್ಯಕ್ಷರಾದ ಬಳಿಕ ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ ಎಂದು ಹೇಳಿದ್ದಾರೆ.ಖರ್ಗೆಯವರು ಕಾಂಗ್ರೇಸ್ ಪಕ್ಷ ಕೊಟ್ಟಂತಹ ಸ್ಥಾನಮಾನಗಳನ್ನು ಮತ್ತು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಪೂರೈಸಿದ್ದಾರೆ. ಇವರು ಒಂದು ಸಮುದಾಯದ ನಾಯಕರಾಗಿ ಗುರುತಿಸಿಕೊಳ್ಳದೇ. ಈ ದೇಶದ ಎಲ್ಲಾ ಸಮುದಾಯದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮುಂಬರುವ ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಇವರ ನೇತೃತ್ವದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ಎಲ್ಲಾ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಮತ್ತಷ್ಟು ಕಾರ್ಯನಿರ್ವಹಿಸಿದಾಗ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ ಪಡೆದುಕೊಳ್ಳಬಹುದು ಎಂದು ಅಭಿಪ್ರಾಯಿಸಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಟ್ಟುಗೂಡಿ ಇಂಡಿಯಾ ಅಲೈನ್ಸ್ ಒಕ್ಕೂಟ ರಚನೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಸೋಲಿಸುವುದೇ ಇದರ ಉದ್ದೇಶವಾಗಿದೆ. ಇವರಿಗೆ ನಮ್ಮ ಹಿಂದುಳಿದ ಸಮುದಾಯದ ಎಲ್ಲಾ ಪ್ರಜೆಗಳು ಬೆಂಬಲವನ್ನು ಕೊಟ್ಟು ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ