ಖರ್ಗೆ ನಾಯಕತ್ವ ಕಲ್ಯಾಣ ಕರ್ನಾಟಕ ಮತ್ತೆ ಕಾಂಗ್ರೆಸ್ ಭದ್ರಕೋಟೆ

ಕಲಬುರಗಿ,ಜೂ.8-ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ದಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ನೇತ್ರತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮತ್ತೆ ಜೀವ ಬಂದಂತಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಿತಾ ಪವನ್ ಕುಮಾರ ವಳಕೇರಿ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆ, ಲೋಕಸಭಾ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಸತತ ಜಯಭೇರಿ ಬಾರಿಸುತ್ತಿರುವ ಕಾಂಗ್ರೆಸ್ ಪಕ್ಷ, ಈ ಭಾಗದಲ್ಲಿ ಖರ್ಗೆಯವರ ನಾಯಕತ್ವವನ್ನು ಎಲ್ಲರೂ ಮೆಚ್ಚಿದ್ದಾರೆ. ಮುಂಬರುವ ದಿನಗಳಲ್ಲಿ ಖರ್ಗೆ ಅವರ ನಾಯಕತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಆಗಲಿದೆ ಮತ್ತು ಈ ಭಾಗದಲ್ಲಿ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳು ಬರುವ ಸಾಧ್ಯತೆಗಳು ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರದಲ್ಲಿ ಎನ್‍ಡಿಎ ಸರಕಾರವಿದ್ದರೂ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ಎರಡನ್ನು ನಿಭಾಯಿಸುವುದರ ಜೊತೆಗೆ ಕಲ್ಯಾಣ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಕೊಡುಗೆಗಳು ಖರ್ಗೆಯವರ ನಾಯಕತ್ವದಲ್ಲಿ ಬರಲಿವೆ ಎಂದು ಅವರು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಖರ್ಗೆ ಅವರಿಗೆ ಉನ್ನತ ಸ್ಥಾನ ಸಿಗಲಿ ಎಂದು ಅವರು ಆಶಿಸಿದ್ದಾರೆ.