ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ; ಆರಗ ಜ್ಞಾನೇಂದ್ರ ವಿರುದ್ಧ ಎಫ್‍ಐಆರ್

ಕಲಬುರಗಿ,4-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ ಮಾಜಿ ಗೃಹ ಸಚಿವ, ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Àನಗರದ ಸಿಐಬಿ ಕಾಲೋನಿ ನಿವಾಸಿ, ಸಮಾಜ ಸೇವಕ ರಾಜೀವ್ ಜಾನೆ ಅವರು ನೀಡಿದ ದೂರಿನ ಮೇರೆಗೆ ಅಶೋನಗರ ಪೆÇಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಆಗಸ್ಟ್ 2ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿ ಖರ್ಗೆ ಅವರ ಮೈಬಣ್ಣದ ಬಗ್ಗೆ ಮಾತನಾಡಿ ಅವಹೇಳನ ಮಾಡಿದ್ದಾರೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರಗ ಜ್ಞಾನೇಂದ್ರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಅಶೋಕನಗರ ಪೊಲೀಸ್ ಠಾಣೆ ಪಿಐ ಪಂಡಿತ್ ಸಗರ ಅವರು ಕಲಂ 504 ಐಪಿಸಿ ಅಡಿಯಲ್ಲಿ ಆರಗ ಜ್ಞಾನೇಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.