ಖಾಯಂ ತಜ್ಞ ವೈದ್ಯಾಧಿಕಾರಿ ನೇಮಕಕ್ಕೆ ಆಗ್ರಹ

ದೇವದುರ್ಗ.ನ.೨೯- ಸಮೀಪದ ಜಾಲಹಳ್ಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಖಾಯಂ ತಜ್ಞ ವೈದ್ಯಾಧಿಕಾರಿ ನೇಮಕಗೊಳಿಸಬೇಕೆಂದು ಡಿವೈಎಫ್‌ವೈ ಸಂಘಟನೆ ಪದಾಧಿಕಾರಿಗಳು ಆಸ್ಪತ್ರೆ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ಆರಂಭಿಸಿದ್ದಾರೆ.
ಆಸ್ಪತ್ರೆಗೆ ಹತ್ತಾರು ಹಳ್ಳಿಗಳ ರೋಗಿಗಳು ಬರುತ್ತಾರೆ. ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಲು ಖಾಯಂ ನುರಿತ ವೈದ್ಯರು ನೇಮಿಸಬೇಕು, ಮಹಿಳಾ ವೈದ್ಯರನ್ನು ನೇಮಕ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿದ್ದಾರೆ.
ಕರ್ತವ್ಯಕ್ಕೆ ಹಾಜರಾಗದ ವೈದ್ಯಾಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಕ್ಸರೇ ವಿಭಾಗ ಮತ್ತು ರಕ್ತ ತಪಫಾಸಣೆ ಕೇಂದ್ರ ಸ್ಥಾಪಿಸಿ ಅಗತ್ಯ ಸಿಬ್ಬಂದಿ ನೇಮಕ ಮಾಡಬೇಕು ಹಾಗೂ ಆಸ್ಪತ್ರೆಯ ರೋಗಿಗಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸ್ವಚ್ಛತೆಗೊಳಿಸಲು ಕ್ರಮ ಕೈಗೊಳ್ಳಬೇಕು ಆಸ್ಪತ್ರೆಯಲ್ಲಿ ಖಾಲಿಯಿರುವ ಎಲ್ಲ ಹುದ್ದೆಗಳನ್ನು ಶೀಘ್ರ ಭರ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.