ಖಾಲಿ ಬಿಂದಿಗೆ ಹಿಡಿದು ಮಹಿಳೆಯರಿಂದ ಆಕ್ರೋಶ

ಸಂಜೆವಾಣಿ ವಾರ್ತೆ
ಸಾಲಿಗ್ರಾಮ: ಫೆ.23:-ಸಾಲಿಗ್ರಾಮ ತಾಲೂಕಿನ ತಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ತಂದ್ರೆ ಅಂಕನಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು. ಯಾವುದೇ ರೀತಿ ಪ್ರಯೋಜನ ಆಗುತ್ತಿಲ್ಲ ಚರಂಡಿಯ ನೀರನ್ನು ಶುದ್ಧೀಕರಿಸಿ ಕುಡಿಯುವ ಪರಿಸ್ಥಿತಿ ಎದುರಾಗಿದೆ. ಇದೆ ರೀತಿ ಮುಂದು ವರೆದರೆ ಗ್ರಾಮ ಪಂಚಾಯಿತಿಯ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಆರೋಗ್ಯ ರಕ್ಷಾ ಕಮಿಟಿಯ ಸದಸ್ಯ ತಂದ್ರೆ ಅಂಕನಹಳ್ಳಿ ಬಸವರಾಜ್ ಗ್ರಾಮಸ್ಥರು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.