ಖಾಲಿ ಹುದ್ದೆ ಭರ್ತಿಗೆ ಆಗ್ರಹ

ಬೆಂಗಳೂರು, ನ. ೧೮- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಆರೋಗ್ಯ ನಿರೀಕ್ಷಣಾಧಿಕಾರಿಗಳ (ಹೆಲ್ತ್ ಇನ್ಸ್‌ಪೆಕ್ಟರ್) ಹುದ್ದೆಗಳನ್ನು ಭರ್ತಿ ಮಾಡುವಂತೆ ಬೆಂಗಳೂರು ಮಹಾನಗರ ಪಾಲಿಕೆಯ ನೌಕರರ ಸಂಘದ ಗೌರವ ಅಧ್ಯಕ್ಷ, ಕಾಂಗ್ರೆಸ್ ಕೋ ಆರ್ಡಿನೇಟರ್ ವಿಜಯ ಕುಮಾರ್ ಸಿಂಹ ಹಾಗೂ ಅಧ್ಯಕ್ಷ ಎನ್. ನಾರಾಯಣರವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಹುದ್ದೆಗಳನ್ನು ಭರ್ತಿ ಮಾಡದೇ ೭ ವರ್ಷಗಳೇ ಕಳೆದಿದ್ದು ಆರೋಗ್ಯ ನಿರೀಕ್ಷಣಾಧಿಕಾರಿ ಡಿಪ್ಲೋಮಾ ಕೋರ್ಸ್ ಮುಗಿಸಿರುವ ಎಷ್ಟೇ ವಿದ್ಯಾರ್ಥಿಗಳ ಜೀವನವು ಇದರಿಂದ ಅತಂತ್ರವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಖಾಸಗಿ ವಲಯದಲ್ಲೂ ಉದ್ಯೋಗವಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಈ ಬಗ್ಗೆ ಆರೋಗ್ಯ ಸಚಿವರಾಗಲಿ, ಸರ್ಕಾರ ಗಮನಹರಿಸದಿರುವುದು ಶೋಚನೀಯವಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಹೆಲ್ತ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಪಡಿಸಿದ್ದಾರೆ.