ಖಾಸಗಿ ಕಟ್ಟಡದಲ್ಲಿರುವ ಇಲಾಖೆಗಳ ಸ್ಥಳಾಂತರಕ್ಕೆ ಒತ್ತಾಯ

ಕೋಲಾರ,ಜು.೭- ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಇಲಾಖೆಗಳನ್ನು ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಅಕ್ರಂಪಾಷ ಅವರಿಗೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡ ಮಿತ್ರ ವೆಂಕಟಪ್ಪ ನೇತೃತ್ವದಲ್ಲಿ ಕನ್ನಡ ಸೇನೆ ಮುಖಂಡರು ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಹಲವು ಇಲಾಖೆಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತೇವೆ, ಖಾಸಗಿ ಕಟ್ಟಡದ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳೀಯ ಬಾಡಿಗೆಗಿಂತ ದುಪ್ಪಟ್ಟು ಬಾಡಿಗೆ ನೀಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿವೆ, ಸರ್ಕಾರಿ ಕಟ್ಟಡಗಳು ಖಾಲಿ ಇದ್ದರೂ ಸಹ ಸರ್ಕಾರಿ ಇಲಾಖೆಗಳನ್ನು ವರ್ಗಾಯಿಸಲು ಅಧಿಕಾರಿಗಳು ಮುಂದಾಗಿಲ್ಲ ಎಂದರು.
ಇನ್ನೂ ಸರ್ಕಾರಿ ಕಚೇರಿಗಳು ಒಂದು ಸ್ಥಳದಲ್ಲಿ ಇದ್ದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ, ಸರ್ಕಾರಕ್ಕೂ ಹಣ ಉಳಿತಾಯವಾಗುತ್ತದೆ. ಕೊಡಲೇ ಜಿಲ್ಲಾಧಿಕಾರಿಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಇಲಾಖೆಗಳ ಮಾಹಿತಿ ಪಡೆದು ಖಾಲಿ ಇರುವ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳವಂತೆ ಮನವಿ ಮಾಡಿದರು.
ಇದೇ ವೇಳೆ ನೂತನ ಜಿಲ್ಲಾಧಿಕಾರಿ ಅಕ್ರಂಪಾಷ ಅವರನ್ನು ಸೇನೆಯ ಪದಾಧಿಕಾರಿಗಳು ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕನ್ನಡ ಸೇನೆ ನಗರಾಧ್ಯಕ್ಷ ನಾಗೇಶ್, ಕಾರ್ಯದರ್ಶಿ ಶ್ರೀಧರ್, ನಗರ ಪ್ರಧಾನ ಕಾರ್ಯದರ್ಶಿ ಅರುಣ್, ಮುನಿಕೃಷ್ಣಪ್ಪ, ರಂಜಿತ್, ರಾಮಚಾರಿ ಹಾಜರಿದ್ದರು.