ಖಾಸಗೀ ಮಾಹಿತಿ ರಕ್ಷಣೆ ನಮ್ಮ ಕರ್ತವ್ಯ: ಹೈಕೋರ್ಟ್ ಗೆ ಕೇಂದ್ರದ ಮಾಹಿತಿ

ನವದೆಹಲಿ, ಮೇ.26- ಹೊಸ ಮಾರ್ಗಸೂಚಿ ಉಲ್ಲಂಘಿಸುವ ಸಾಮಾಜಿಕ ಜಾಲತಾಣ ವೇದಿಕೆಗಳ
ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿರುವ ನಡುವೆಯೇ ಖಾಸಗಿ ಮಾಹಿತಿ ರಕ್ಷಣೆ ನಮ್ಮ ಕರ್ತವ್ಯ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದೆ.

ಕೇಂದ್ರ ಸರ್ಕಾರದ ಹೊಸ ಮಾಹಿತಿ ತಂತ್ರಜ್ಞಾನ ಮಾರ್ಗಸೂಚಿಗಳನ್ನು ಪ್ರಶ್ನಿಸಿ ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಅದರ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ಬಳಕೆದಾರರ ಖಾಸಗಿತನ ಮತ್ತು ಅವರ ಮಾಹಿತಿಯನ್ನು ರಕ್ಷಣೆ ಮಾಡುವ ತಮ್ಮ ಕರ್ತವ್ಯ ಹೇಳಿದೆ.

ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್ ಬುಕ್, ವಾಟ್ಸಾಪ್, ಹಾಗೂ ಟ್ವಿಟ್ಟರ್ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕು ಇಲ್ಲದಿದ್ದರೆ ಅವುಗಳ ಮಾನ್ಯತೆಯನ್ನು ಮಾಡಲಾಗುವುದು ಜೊತೆಗೆ ದೇಶದಲ್ಲಿ ಬಳಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿನ್ನೆಯ ತನಕ ಗಡುವು ನೀಡಿತ್ತು.

ಪ್ರಮುಖ ಸಾಮಾಜಿಕ ಜಾಲತಾಣ ವೇದಿಕೆಗಳ ಬಗ್ಗೆ ಫೇಸ್ ಬುಕ್ ಕೇಂದ್ರ ಸರ್ಕಾರದ ನಿಯಮಗಳನ್ನು ಪಾಲಿಸಲು ಸಿದ್ಧ ಎಂದು ಈಗಾಗಲೇ ಪ್ರಕಟಿಸಿದೆ.
ಇದರ ಬೆನ್ನಲ್ಲೇ ವಾಟ್ಸಾಪ್ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ.

ದೆಹಲಿ ಹೈಕೋರ್ಟ್ ನಲ್ಲಿ ತಾನು ತೆಗೆದುಕೊಂಡಿರುವ ಮಾರ್ಗಸೂಚಿಗಳನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಮಾಹಿತಿ ಮತ್ತು ವಿದ್ಯುನ್ಮಾನ ಸಂಪರ್ಕ ಸಚಿವಾಲಯ, ಜನರ ಮಾಹಿತಿಗಳನ್ನು ರಕ್ಷಣೆ ಮಾಡಲು ಇಂಥದೊಂದು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಸಾಮಾಜಿಕ ಜಾಲತಾಣ ವೇದಿಕೆಗಳು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು ಇಲ್ಲದಿದ್ದರೆ ಅಂತಹ ವೇದಿಕೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ ಕೇಂದ್ರ ಸರ್ಕಾರ ನೀಡಿದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಸದ್ಯಕ್ಕಿರುವ ಕುತೂಹಲ.

ಕೇಂದ್ರ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳಲ್ಲಿ ಹಲವು ಗೊಂದಲಗಳಿವೆ ಅವುಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ವಾಟ್ಸಾಪ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ