ಖೋಖೋ ಪಂದ್ಯಾವಳಿಗೆ ಸಜ್ಜಾಗುತ್ತಿರುವ ಕ್ರೀಡಾಂಗಣ

ಹಿರಿಯೂರು.ಜು.19-ಹಿರಿಯೂರಿನ ನ್ಯೂ ಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ನಗರದ ನೆಹರು ಮೈದಾನದಲ್ಲಿ  ಇದೇ 22 ರಿಂದ 3ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಖೋ ಖೋಪಂದ್ಯಾವಳಿಗೆ ಕ್ರೀಡಾಂಗಣ ಸಿದ್ಧವಾಗುತ್ತಿದ್ದು ರಾಜ್ಯ ಪ್ರವರ್ಗ 1 ರ ಒಕ್ಕೂಟಗಳ ಅಧ್ಯಕ್ಷರಾದ ಡಿ.ಟಿ. ಶ್ರೀನಿವಾಸ್ ಹಾಗೂ ಅನೇಕ ಗಣ್ಯರು ಹಾಗೂ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಭೇಟಿ ನೀಡಿ ವೀಕ್ಷಿಸಿದರು.