ಗಂಗಾಧರರಾವ ದೇಶಪಾಂಡೆ ಸ್ಮರಣೋತ್ಸವ

ಕಲಬುರಗಿ,ಜು.30: ಸ್ವಾತಂತ್ರ್ಯ ಹೋರಾಟಗಾರ, ‘ಕರ್ನಾಟಕದ ಹುಲಿ’ ಎಂಬ ಬಿರುದಾಂಕಿತ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ ಗಂಗಾಧರರಾವ ದೇಶಪಾಂಡೆ ಅವರ ಸ್ಮರಣೋತ್ಸವ ಕಾರ್ಯಕ್ರಮವು ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನ ಚಿಗುರು ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ದೇಶಪಾಂಡೆ ಅವರ ಕೊಡುಗೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ, ಟ್ಯೂಟೋರಿಯಲ್ಸ್‍ನ ಅಮರ ಜಿ.ಬಂಗರಗಿ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಶಿಕ್ಷಕರಾದ ಪ್ರಕಾಶ ಸರಸಂಬಿ, ಶರಣಬಸಪ್ಪ ಮಲಶೆಟ್ಟಿ ಹಾಗೂ ವಿದ್ಯಾರ್ಥಿಗಳಿದ್ದರು.