ಗಂಗಾವತಿಯ ನಗರಸಭೆ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ

ಗಂಗಾವತಿ ನ 01 : ಸ್ಥಳೀಯ ನಗರಸಭೆ ಕಚೇರಿಯಲ್ಲಿ ಭಾನುವಾರ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಪೌರಾಯುಕ್ತ ಅರವಿಂದ ಜಮಕಂಡಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಎಲ್ಲ ಸಿಬ್ಬಂದಿ ವರ್ಗದವರಿಗೆ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಪ್ರತಿಜ್ಞೆ ವಿಧಿ ಬೋಧಿಸಲಾಯಿತು.