ಸಂಜೆವಾಣಿ ವಾರ್ತೆ
ಗಂಗಾವತಿ, ಜು,6- ಸದಸ್ಯರಿಂದ ಗೌಪ್ಯ ಮತದಾನ ಮೂಲಕ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ತಹಸೀಲ್ದಾರ ಮಂಜುನಾಥ ಭೋಗಾವತಿ ಹೇಳಿದರು.
ನಗರದ ತಾಲೂಕು ಪಂಚಾಯತಿಯ ಮಂಥನ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಸಲು ಅಧಿಕಾರಿಗಳು, ಗ್ರಾಪಂ ಪಿಡಿಓಗಳು, ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈಗಾಗಲೇ ತಾಲೂಕಿನ 18 ಗ್ರಾಪಂಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಡಿಸಲಾಗಿದ್ದು, ಎಲ್ಲ ಗ್ರಾಪಂಗಳಿಗೆ ಜುಲೈ 18 ರಿಂದ 21 ರವರೆಗೆ ನಾಲ್ಕು ದಿನದಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ ಎಲ್ಲ ಪ್ರಕ್ರಿಯೆ ವಿಡಿಯೋ ಚಿತ್ರೀಕರಣ ಕಡ್ಡಾಯವಾಗಿ ಮಾಡಬೇಕು. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಇರಬೇಕು ಎಂದರು.
ಈ ವೇಳೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್, ಸಿಪಿಐ ಮಂಜುನಾಥ, ಬಿಇಓ ಸೋಮಶೇಖರಗೌಡ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಪಟ್ಟದಕಲ್ಲು, ತಾಲೂಕು ಹಿಂದುಳಿದ ವರ್ಗ ವಿಸ್ತಿರ್ಣಾಧಿಕಾರಿ ಶ್ರೀನಿವಾಸ್ ನಾಯಕ, ಶಿರಸ್ತೇದಾರ್ ರವಿಕುಮಾರ ನಾಯಕವಾಡಿ, ತಾಪಂ ಸಹಾಯಕ ನಿರ್ದೇಶಕ ಸುರೇಶ ಉಪ್ಪಾರ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಪಂ ಕಾರ್ಯದರ್ಶಿಗಳು ಇದ್ದರು.