ಗಂಗಾ ನಗರದಲ್ಲಿ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನನ್ನನ್ನು ಬೆಂಬಲಿಸಿ: ರಾಧಾಕೃಷ್ಣ ದೊಡ್ಡಮನಿ

ಕಲಬುರಗಿ,ಏ.23-ನಗರದ ಗಂಗಾ ನಗರದಲ್ಲಿ ಕಲ್ಬುರ್ಗಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರದ ವಾರ್ಡ್ ನಂಬರ್ 26ರ ಲೋಕಸಭಾ ಚುನಾವಣಾ ಕಾಂಗ್ರೆಸ್ ಪಕ್ಷದ ಪ್ರಚಾರ ಕಚೇರಿ ಸೋಮವಾರ ಉದ್ಘಾಟಿಸಲಾಯಿತು.
ಕಚೇರಿ ಉದ್ಘಾಟಿಸಿದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಮಾತನಾಡಿ, ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದರು.
ಮಾಜಿ ಸಚಿವ ಮಾಲೀಕಯ್ಯ ಮಾತನಾಡಿ, ಮರಳಿ ನಾನು ಕಾಂಗ್ರೆಸ್ ಮನೆಗೆ ಬಂದಿದ್ದೇನೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು. ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು ಬಾರಿ ಶಾಸಕನಾಗಿ, ಸಚಿವನಾಗಿ ನಿಮ್ಮ ಸೇವೆ ಮಾಡಿರುವೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನೀವು ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರಿಗೆ 1.50 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ತರಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಉತ್ತರ ಮತ್ತು ದಕ್ಷಿಣ ಪ್ರಚಾರ ಕಚೇರಿ ಮೊಟ್ಟಮೊದಲ ಬಾರಿಗೆ ಕಲ್ಬುರ್ಗಿಯ ಗಂಗಾನಗರದಲ್ಲಿ ಸ್ಥಾಪನೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು ಈ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ 20 ರಿಂದ 25 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಮಾಲಿಕಯ್ಯ ಅವರ ಮಾರ್ಗದರ್ಶನದಲ್ಲಿ ಕಲ್ಬುರ್ಗಿಯ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರ ಹೊಂದಿರುವ ಗಂಗಾನಗರ, ಮಾಣಿಕೇಶ್ವರಿ ಕಾಲೋನಿ, ರಾಘವೇಂದ್ರ ಕಾಲೋನಿ, ನ್ಯೂ ರಾಘವೇಂದ್ರ ಕಾಲೋನಿ, ಚೌಡೇಶ್ವರಿ ಕಾಲೋನಿಗಳ ನಿವಾಸಿಗಳು ಕಾಂಗ್ರೆಸ್ ಅಭ್ಯರ್ಥಿಯಾದ ರಾಧಾಕೃಷ್ಣ ಅವರಿಗೆ ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ಮನವಿ ಮಾಡಿದರು.
ವಿವಿಧ ಪಕ್ಷಗಳು ತೊರೆದು ಕಾಂಗ್ರೆಸ್ ಸೇರ್ಪಡೆ:
ಸೇಡಂ ಮತಕ್ಷೇತ್ರದ ವಿವಿಧ ಗ್ರಾಮಗಳ ಮತ್ತು ಕಲ್ಬುರ್ಗಿ ನಗರದ ಗಂಗಾ ನಗರ, ಮಾಣಿಕೇಶ್ವರಿ ಕಾಲೋನಿ, ಚೌಡೇಶ್ವರಿ ಕಾಲೋನಿ, ರಾಘವೇಂದ್ರ ಕಾಲೋನಿ, ನ್ಯೂ ರಾಘವೇಂದ್ರ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳ ಕೋಲಿ ಸಮಾಜದ ಮುಖಂಡರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ನಗರಸಭೆ ಸದಸ್ಯರಾದ ಅನುಪಮ ರಮೇಶ ಕಮಕನೂರ, ಮುಖಂಡರಾದ ರಾಜಗೋಪಾಲ್ ರೆಡ್ಡಿ , ಸಂದೇಶ ಕಮಕನೂರ, ಪ್ರಕಾಶ ಕಮಕನೂರ, ವಿಜಯಕುಮಾರ್ ಹದಗಲ್, ನಿಂಗರಾಜ ಕಣ್ಣಿ ಸೇರಿದಂತೆ ವಿವಿಧ ಮುಖಂಡರು ಮತ್ತು ಕೋಲಿ ಸಮಾಜದ ಅಭಿಮಾನಿಗಳು ಇದ್ದರು.