ಗಂಗಾ ಪರಮೇಶ್ವರಿ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

{"remix_data":[],"source_tags":[],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಸಂಜೆವಾಣಿ ವಾರ್ತೆ.
ಚಿತ್ತಾಪುರ: ಏ.15:ಪಟ್ಟಣದ ಶ್ರೀ ಗಂಗಾ ಪರಮೇಶ್ವರಿ ಕಲಾ,ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
2023-24ನೇ ಸಾಲಿನ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಕಲಾ ವಿಭಾಗದಿಂದ ಅನುರಾಧ 90%, ಭವಾನಿ 83%, ಭಾಗ್ಯಶ್ರೀ 79% ಮತ್ತು ವಾಣಿಜ್ಯ ವಿಭಾಗದಲ್ಲಿ ಮಲ್ಲಿಕಾ 86%, ಮಸ್ತಾನ್ ಅಲಿ 84% ಪಡೆದು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಾಲೇಜಿಗೆ ಸರಾಸರಿ 90% ಬಂದಿದ್ದು
ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಗೆ ಶ್ರೀ ಗಂಗಾ ಪರಮೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಅಮರೇಶ್ವರಿ ಬಾಬುರಾವ್ ಚಿಂಚನಸೂರ, ಮತ್ತು ಸಂಸ್ಥೆಯ ಸಂಸ್ಥಾಪಕರಾದ ಬಾಬುರಾವ್ ಚಿಂಚನಸೂರ ಮತ್ತು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರ ವೃಂದ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.