ಗಂಜ್ ಏರಿಯಾದಲ್ಲಿ ಅಬಕಾರಿ ದಾಳಿ

ಕಲಬುರಗಿ,ಮೇ.2-ಅಬಕಾರಿ ಇಲಾಖೆ ಅಧಿಕಾರಿಗಳು ಗಂಜ್ ಏರಿಯಾದಲ್ಲಿ ದಾಳಿ ಮಾಡಿ ದ್ವಿಚಕ್ರ ವಾಹನದ ಮೇಲೆ ಸಾಗಿಸುತ್ತಿದ್ದ 10117 ರೂ.ಮೌಲ್ಯದ ಮದ್ಯ ಮತ್ತು 40000 ರೂ.ಮೌಲ್ಯದ ದ್ವಿಚಕ್ರ ವಾಹನ ಸೇರಿ 50117 ರೂ.ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ.
ಅಬಕಾರಿ ಅಪರ ಆಯುಕ್ತರು, ಕಲಬುರಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಕಲಬುರಗಿ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಅಬಕಾರಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಈ ಸಂಬಂಧ ಅಬಕಾರಿ ನಿರೀಕ್ಷಕ ಗೋಪಾಳೆ ಪಂಡಿತ್ ಅವರು ಪ್ರಕರಣ ದಾಖಲು ಮಾಡಿದ್ದಾರೆ.