ಗಂಡು ಮಗುವಿನ ತಂದೆಯಾದ ನಟ ನಿಖಿಲ್

ಬೆಂಗಳೂರು, ಸೆ.24- ನಟ ನಿಖಿಲ್ ಕುಮಾರ್ ಕುಟುಂಬಕ್ಕೆ ಹೊಸ ಅತಿಥಿ ಆಗಮನವಾಗಿದೆ.

ನಿಖಿಲ್ ಪತ್ನಿ ರೇವತಿ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪುತ್ರವನ್ನು ಎತ್ತಿಕೊಂಡು ನಟ ನಿಖಿಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಖಾಸಗಿ ಆಸ್ಪತ್ರೆಯಲ್ಲಿ ರೇವತಿ ಅವರು ಇಂದು ಮದ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ, ಅನಿತಾ ದಂಪತಿ ವಿಚಾರಿಸಿದ್ದಾರೆ.

ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿಗಷ್ಟೇ ರೇವತಿ ಅವರ ಸೀಮಂತ ಕಾರ್ಯಕ್ರಮ ನಗರದಲ್ಲಿ ನಡೆದಿತ್ತು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬಕ್ಕೆ ಮರಿ ಮಗನ ಆಗಮನವಾಗಿದ್ದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಮೊಮ್ಮಗನ ಆಗಮನದಿಂದ ಖುಷಿಯಾಗಿದ್ದಾರೆ