(ಸಂಜೆವಾಣಿ ವಾರ್ತೆ)
ಹುಮನಾಬಾದ್:ಜೂ.20: ಸಮೀಪದ ಗಡವಂತಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲದಿದ ಕಾರ್ಯಕಾರಿಣಿ ಸಭೆಯನ್ನು ಸಭೆ ಜರುಗಿತು.
ಶಾಸಕ ಡಾ.ಸಿದ್ದಲಿಂಗಪ್ಪಾ ಪಾಟೀಲ ಅವರು ಸಭೆ ಉದ್ಘಾಟಿಸಿ ಮಾತನಾಡಿ, ಕೇಂದ್ರದ ನವೀಕರಿಸಬಹುದಾದ ಇಂದನ ಮೂಲ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರೊಂದಿಗೆ ಭಾಗವಹಿಸಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸಬೇಕು ಪ್ರಧಾನಿ ನರೇಂದ್ರ ಮೋದಿ ಜೀ ಮತ್ತು ಹಿಂದೆ ನೀಡಿರುವ ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಬೇಕು ಎಂದು ಮನವಿ ಮಾಡಿದರು.
ಕೇಂದ್ರದ ನವೀಕರಿಸಬಹುದಾದ ಇಂದನ ಮೂಲ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೋಮನಾಥ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಮಾಡಗೂಳ, ಮಾಯಾದೇವಿ ಸಿಂದನಕೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ಅಂಬೇಡ್ಕರ ನಿಗಮ ಮಾಜಿ ನಿರ್ದೇಶಕ ಬಸವರಾಜ ಆರ್ಯ, ಮಂಡಲದ ಅಧ್ಯಕ್ಷ ಪ್ರಭಾಕರ ನಾಗರಾಳೆ, ಮಂಡಲದ ಸಂಘಟನಾ ಪ್ರಭಾರಿ, ಸುರೇಶ ಬಿರಾದರ, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಸೈಯಾದ ಇಲಿಯಾಸ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಗಜೇಂದ್ರ ಕನಕಟಕರ್, ಮಂಡಲದ ಕಾರ್ಯದರ್ಶಿ ಅನಿಲ ಪಸಾರ್ಗಿ, ರಾಜಕುಮಾರ ಭಂಡಾರಿ, ಮಹಿಳಾ ಮೋರ್ಚಾ ಅಧ್ಯಕ್ಷ ಉಷಾರಾಣಿ ರೆಡ್ಡಿ, ಪಕ್ಷದ ಮುಖಂಡರಾದ ಸೂರ್ಯಕಾಂತ ಮಠಪತಿ, ಮಲ್ಲಿಕಾರ್ಜುನ ಸಿಗಿ, ನಾರಾಯಣ ರಾಂಪುರೆ, ಸೇರಿದಂತೆ ಬಿಜೆಪಿಯ ಎಲ್ಲಾ ಮೋರ್ಚಾ ಅಧ್ಯಕ್ಷರು, ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಮತ್ತು ಬಿ.ಜೆ.ಪಿ ಕಾರ್ಯಕರ್ತರು, ಇದ್ದರು.