ಗಡೀಪಾರದ ವಿದ್ಯಾರ್ಥಿಗಳ ವಿಚಾರಣೆ

ಹೈದರಾಬಾದ್,ಅ.೧೯-ಅಮೇರಿಕಾದ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದು ವೀಸಾ ಪಡೆದು ಅಲ್ಲಿನ ವಿಮಾನ ನಿಲ್ದಾಣಗಳಲ್ಲಿ ಸಾಕಷ್ಟು ಭರವಸೆಯೊಂದಿಗೆ ಬಂದಿಳಿದ ವಿದ್ಯಾರ್ಥಿಗಳಿಗೆ ಅಲ್ಲಿನ ಅಧಿಕಾರಿಗಳು ಆಘಾತ ನೀಡಿ
೨೧ ಭಾರತೀಯ ವಿದ್ಯಾರ್ಥಿಗಳನ್ನು ಸರಿಯಾದ ದಾಖಲೆಗಳಿಲ್ಲದೆ ಕಾರಣ ನೀಡಿ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು .
ಇವರಲ್ಲಿ ಹೆಚ್ಚಿನವರು ತೆಲುಗು ವಿದ್ಯಾರ್ಥಿಗಳೇ ಆಗಿದ್ದು ಈ ಹಿನ್ನಲೆಯಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ಈ ಘಟನೆ ಬಗ್ಗೆ ವಿಚಾರಿಸಿದ್ದಾರೆ. ವಾಪಸಾದ ವಿದ್ಯಾರ್ಥಿಗಳ ವಿವರ ಪಡೆದು ಅವರ ಸಮಸ್ಯೆ ಬಗೆಹರಿಸುವಂತೆ ಸಿಎಂ ಕಚೇರಿ ಅಧಿಕಾರಿಗಳಿಗೆ ಸೂಚಿಸಿದ್ದು,ಸಂತ್ರಸ್ತ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿ ಈ ವಿಷಯದ ಬಗ್ಗೆ ಸಂಪೂರ್ಣ ಗಮನ ಹರಿಸಲು ಮತ್ತು ಅಗತ್ಯವಿದ್ದರೆ ವಿದೇಶಾಂಗ ಇಲಾಖೆಯೊಂದಿಗೆ ಸಮಾಲೋಚಿಸಲು ಸೂಚಿಸಲಾಗಿದೆ.