ಗಣತಂತ್ರ ವ್ಯವಸ್ಥೆಯನ್ನು ಸಂರಕ್ಷಿಸಲು ರಾಷ್ಟ್ರೀಯ ಐಕ್ಯತಾ ಸಪ್ತಾಹ

ವಿಜಯಪುರ, ನ.21-ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಕೋಶದ ವತಿಯಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಪಿ.ಜಿ.ತಡಸದ ಮಾತನಾಡಿ, ದೇಶದ ಐಕ್ಯತೆ, ಅಖಂಡತೆ ಮತ್ತು ಸಾರ್ವಭೌಮ ಗಣತಂತ್ರ ವ್ಯವಸ್ಥೆಯನ್ನು ಸಂರಕ್ಷಿಸಲು ಮತ್ತು ಇದನ್ನು ಮುಂದಿನ ಪೀಳಿಗೆಗೆ ಈ ಸಂದೇಶವನ್ನು ತಿಳಿಸಲು ಈ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿ ಹಾಜರಿದ್ದ ಎಲ್ಲರಿಗೂ ಪ್ರಮಾಣ ವಚನವನ್ನು ಬೋಧಿಸಿದರು.
ಪ್ರೊ. ಎಸ್.ಎ.ಖಾಜಿ ನಿರ್ದೇಶಕರು ಪಿ.ಎಮ್.ಇ.ಬಿ ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಪ್ರೊ. ನಾಮದೇವ ಗೌಡ ಪ್ರಾಸ್ತಾವಿಕ ಮಾತುಗಳನ್ನಾಡುವ ಮೂಲಕ ಸರ್ವರನ್ನು ಸಭೆಗೆ ಸ್ವಾಗತಿಸಿದರು. ಡಾ.ಕಲಾವತಿ ಕಾಂಬಳೆ ನಿರೂಪಿಸಿದರು, ಜೆನ್ನಿಫರ್ ಸೌಲಮ್ ವಂದಿಸಿದರು.