ಗಣದಿನ್ನಿ ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಸ್ವೀಕಾರ

ಸಿರವಾರ ಆ೧೨: ತಾಲೂಕಿನ ಗಣದಿನ್ನಿ ಗ್ರಾಮ ಪಂಚಾಯತ್ ಗೆ ಇತ್ತೀಚಿಗೆ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಸೂಗೂರಯ್ಯ ಸ್ವಾಮಿ ಹಿರೇಮಠ ಅವರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು.
ನಂತರ ’ಸಂಜೆ ವಾಣಿ’ ಯೊಂದಿಗೆ ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಸಮಗ್ರ ಅಭಿವೃದ್ಧಿಯೇ ನನ್ನ ಆಶಯ. ವಸತಿ ಯೋಜನೆಯ ಮನೆಗಳು, ಶೌಚಾಲಯ ಗಳು, ಚರಂಡಿಗಳು, ಸಾಂಕ್ರಾಮಿಕ ರೋಗಗಳ ಹತೋಟಿಗೆ ಕ್ರಮ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಸದಸ್ಯರು, ಹಿತೈಷಿಗಳು, ಮಿತ್ರರು ಭಾಗವಹಿಸಿ, ಶುಭ ಹಾರಿಸಿದರು.