ಗಣನೀಯ ಸೇವೆಸಲ್ಲಿಸಿದ ಅರ್ಹರಿಗೆ ಪ್ರಶಸ್ತಿ ನೀಡಿ ಗೌರವ ಸನ್ಮಾನ: ಅರಸ್

ಹುಮನಾಬಾದ್: ಮಾ.28:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಏಪ್ರೀಲ್ 5 ರಂದು ಡಾ. ಬಾಬು ಜಗಜೀವನರಾಂ ಹಾಗೂ ಏಪ್ರೀಲ್ 14 ರಂದು ಡಾ. ಬಿ ಆರ್ ಅಂಬೇಡ್ಕರ್‍ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುತ್ತದೆ.

ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ. ಆರ್. ಅಂಬೇಡ್ಕರ್‍ರವರ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪೆÇ್ರೀತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2022, 23ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್ 1 ಸಹಾಯಕ ನಿರ್ದೇಶಕ ಲಿಂಗ ಅರಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಮನಾಬಾದ್ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪೆÇ್ರೀತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ಸೂಕ್ತ ದಾಖಲಾತಿಗಳೊಂದಿಗೆ ಎಪ್ರೀಲ್ 28ರ ಮಧ್ಯಾಹ್ನ 1 ಗಂಟೆಯೊಳಗಾಗಿ ಸಹಾಯಕ ನಿರ್ದೇಶರು ಗ್ರೇಡ-1, ಸಮಾಜ ಕಲ್ಯಾಣ ಇಲಾಖೆ ಹುಮನಾಬಾದ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್ 1 ಸಹಾಯಕ ನಿರ್ದೇಶಕ ಲಿಂಗರಾಜ ಅರಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.